ADVERTISEMENT

ಮಹಿಳಾ ದಿನ; ಮ್ಯಾರಾಥಾನ್ ಸಂಭ್ರಮ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 14:25 IST
Last Updated 5 ಮಾರ್ಚ್ 2021, 14:25 IST
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಮ್ಯಾರಾಥಾನ್ ಓಟಕ್ಕೆ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಚಾಲನೆ ನೀಡಿದರು 
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಮ್ಯಾರಾಥಾನ್ ಓಟಕ್ಕೆ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಚಾಲನೆ ನೀಡಿದರು    

ವಿಜಯಪುರ: ಮಹಿಳಾ ಸಬಲೀಕರಣಕ್ಕಾಗಿ ನಡೆದಿರುವ ಈ ಮ್ಯಾರಾಥಾನ್ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ. ತುಳಸಿಮಾಲ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ಸಮಾಜದಲ್ಲಿ ಮಹಿಳಾ ಸಬಲೀಕರಣ ವಿವಿಧ ಆಯಾಮಗಳಲ್ಲಿ ಸಾಕಾರಗೊಳ್ಳುತ್ತಿರುವುದು ಅತ್ಯಂತ ಹರ್ಷದಾಯಕವಾಗಿದೆ ಎಂದು ಅವರು ಹೇಳಿದರು.

ADVERTISEMENT

ಬೆಳಿಗ್ಗೆ 6ಕ್ಕೆ ನಗರದ ಸೈನಿಕ ಸ್ಕೂಲ್, ಕೋರ್ಟ್ ಸರ್ಕಲ್, ಬಿ.ಎಲ್.ಡಿ.ಇ ರಸ್ತೆ ಮತ್ತು ಗೋಳಗುಮ್ಮಟನಿಂದ ಏಕಕಾಲಕ್ಕೆ ಆರಂಭವಾದ ಮ್ಯಾರಾಥಾನ್ ಗಾಂಧಿಚೌಕದಲ್ಲಿ ಮುಕ್ತಾಯವಾಯಿತು.

ಮ್ಯಾರಾಥಾನ್‍ನಲ್ಲಿ ಮಹಿಳಾ ವಿವಿಯ ವಿವಿಧ ವಿಭಾಗಗಳ ಬೋಧಕ, ಬೋಧಕೇತರ ಸಿಬ್ಬಂದಿ, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.