ADVERTISEMENT

ಮಹಿಳೆಯರಿಗೆ ಆರೋಗ್ಯ ಕಾಳಜಿ ಅಗತ್ಯ: ನ್ಯಾಯಾಧೀಶ ಹರೀಶ

ರಾಷ್ಟ್ರೀಯ ಪೋಷಣ ಮಾಸಾಚರಣೆ, ಸ್ವಸ್ಥ್ಯನಾರಿ, ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 5:32 IST
Last Updated 3 ಅಕ್ಟೋಬರ್ 2025, 5:32 IST
ಬಬಲೇಶ್ವರ ತಾಲ್ಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ನಡೆದ  ರಾಷ್ಟ್ರೀಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಇತ್ತೀಚೆಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಹರೀಶ ಎ. ಚಾಲನೆ ನೀಡಿದರು 
ಬಬಲೇಶ್ವರ ತಾಲ್ಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ನಡೆದ  ರಾಷ್ಟ್ರೀಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಇತ್ತೀಚೆಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಹರೀಶ ಎ. ಚಾಲನೆ ನೀಡಿದರು    

ಬಬಲೇಶ್ವರ: ತಾಯಂದಿರು ಸಂಸಾರವನ್ನು ಸಾಗಿಸುವುದರ ಜೊತೆಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಹರೀಶ ಎ. ಹೇಳಿದರು. 

ತಾಲ್ಲೂಕಿನ ಸಾರವಾಡ ಗ್ರಾಮದ ಈಶ್ವರಲಿಂಗ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಂಗ ಇಲಾಖೆ, ಜಿಲ್ಲಾ ವಕೀಲರ ಸಂಘ  ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೋಷಣ ಮಾಸಾಚರಣೆ, ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ತಾಯಂದಿರು ಬೆಳಿಗ್ಗೆಯಿಂದ ರಾತ್ರಿಯವರೆಗೆ ಕೆಲಸಗಳಲ್ಲಿ ನಿರತರಾಗಿರುತ್ತಾರೆ. ಅವರಿಗೆ ಬಿಡುವು ಅನ್ನುವುದೇ ಮರೀಚಿಕೆಯಾಗಿರುತ್ತದೆ. ಇಂತಹ ಸಮಯದಲ್ಲಿ ಅವರು ಅನಾರೋಗ್ಯಕ್ಕೆ ತುತ್ತಾಗಿ ಕಷ್ಟ ಪಡುವಂತಹ ಪರಿಸ್ಥಿತಿ ಒದಗಿ ಬರುತ್ತವೆ. ಈ ದೃಷ್ಟಿಯಲ್ಲಿ ತಮ್ಮ ಆರೋಗ್ಯ ರಕ್ಷಣೆ ಕೂಡ ಅಷ್ಟೇ ಮಹತ್ವದಾಗಿರುತ್ತದೆ.  ಕೆಲಸಗಳ ನಡುವೆ ತಮ್ಮ ಆರೋಗ್ಯಕ್ಕೂ ಮೀಸಲಿಡಬೇಕು ಎಂದು ಹೇಳಿದರು.

ADVERTISEMENT

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಮಾತನಾಡಿ, ದೌರ್ಜನ್ಯ, ಅನ್ಯಾಯವಾದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಪ್ರಶ್ನಿಸುವ ಹಕ್ಕವುಳ್ಳವರಾಗಿದ್ದು, ತಮಗೆ ಹತ್ತಿರದ ಗ್ರಾಮ ಪಂಚಾಯಿತಿ ಇಲ್ಲವೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿರುವ ಜನತಾ ನ್ಯಾಯಾಲಯಗಳಲ್ಲಿ ದೂರು ದಾಖಲಿಸಬೇಕು ಎಂದರು.

ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಅದರೊಂದಿಗೆ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಕಡಿಮೆ ಮಾಡಬೇಕು, ಗ್ರಾಮದ ಕೆರೆಗಳನ್ನು ರಕ್ಷಿಸಲು ಕೈಜೋಡಿಸಬೇಕು ಎಂದರು.

ಪ್ರತಿ ಗ್ರಾಮ ಪಂಚಾಯಿತಿ, ಕಾನೂನು ಮಹಾವಿದ್ಯಾಲಯಗಳಲ್ಲಿ ಲೀಗಲ್ ಸೇವಾ ಕ್ಲಿನಿಕ್‍ಗಳನ್ನು ತೆರೆಲು ಕ್ರಮ ವಹಿಸಲಾಗುತ್ತಿದೆ. ಲೋಕ ಅದಾಲತ್‍ಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ರಾಜಿ ಸಂದಾನದ ಮೂಲಕ ಮಧ್ಯಸ್ಥಿಕೆ ವಹಿಸಿ ತಮ್ಮ ತಮ್ಮ ದೂರುಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಸಾರ್ವಜನಿಕರು, ಮಹಿಳೆಯರು, ಮಕ್ಕಳು ಇದರ ಸದುಪಯೊಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

ಜಿಲ್ಲಾ ನ್ಯಾಯಾಧೀಶ ಜೈ ಶಂಕರ ಮಾತಾನಾಡಿ, ಗರ್ಭಿಣಿಯರಿಗೆ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ದೊರಕುವಂತೆ ಕಾನೂನು ಸೇವಾ ಪ್ರಾಧಿಕಾರ ಕರ್ತವ್ಯ ನಿರ್ವಹಿಸುತ್ತದೆ ಹಾಗೂ ನ್ಯಾಯಾಧೀಶರೆ ಇದರ ಉಸ್ತುವಾರಿ ವಹಿಸಿಕೊಳ್ಳುತ್ತದ್ದಾರೆ ಎಂದು ಅವರು ತಿಳಿಸಿದರು.

ಗ್ರಾಮ ಪಂಚಾಯತ ಅಧ್ಯಕ್ಷ ಮಕಲನಗೌಡ ಪಾಟೀಲ್,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಬಬಲೇಶ್ವರ ತಹಶೀಲ್ಧಾರ್‌ ಶಾಂತಲಾ ಚಡಚಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ. ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ. ಚವ್ಹಾಣ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಡಾ. ಮಲ್ಲನಗೌಡ ಬಿರಾದಾರ, ಬಬಲೇಶ್ವರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಎಚ್ ಪಠಾಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪವಿತ್ರಾ ನೀಲಖೇಣಿ, ಎಸ್.ಸಿ ಮ್ಯಾಗೇರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.