ADVERTISEMENT

ಮಹಿಳಾ ವಿವಿ: ಉಪನ್ಯಾಸಕರ ಹುದ್ದೆಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:27 IST
Last Updated 24 ಜೂನ್ 2025, 16:27 IST
   

ವಿಜಯಪುರ: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಜಯಪುರ ಮುಖ್ಯ ಆವರಣ ಹಾಗೂ ಮಂಡ್ಯ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸ್‍ಗಳ ವಿಷಯಗಳಿಗೆ ಪೂರ್ಣಕಾಲಿಕ, ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಮೂಲ ಹಾಗೂ ನಕಲು ದ್ವಿಪ್ರತಿಯ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಭರಿಸಿ, ನಿಗದಿಪಡಿಸಿದ ವೇಳಾಪಟ್ಟಿಯನುಸಾರ ಜುಲೈ 3 ರಂದು ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾಭವನದಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ www.kswu.ac.inನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.