ADVERTISEMENT

ವಿಜಯಪುರ | ಮಹಿಳಾ ವಿವಿ: ನಾಮದೇವಗೌಡ ಹಂಗಾಮಿ ಕುಲಪತಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 16:27 IST
Last Updated 30 ಜೂನ್ 2025, 16:27 IST
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಸೋಮವಾರ ಅಧಿಕಾರ ಸ್ವೀಕರಿಸಿದರು 
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಸೋಮವಾರ ಅಧಿಕಾರ ಸ್ವೀಕರಿಸಿದರು    

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ ಗೆಹಲೋಟ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್‍ಶಿಪ್ ಅವಧಿ ಜೂನ್ 27ರಂದು ಪೂರ್ಣಗೊಂಡಿದ್ದರಿಂದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. 

ಪ್ರೊ.ಮಲ್ಲಿಕಾರ್ಜುನ ಅವರ ಡೀನ್‍ಶಿಪ್ ಅವಧಿ ಸೋಮವಾರ ಪೂರ್ಣಗೊಂಡಿದ್ದರಿಂದ ರಾಜ್ಯಪಾಲರು ಮುಂದಿನ ಆದೇಶದ ವರೆಗೆ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ADVERTISEMENT

ಅಧಿಕಾರ ಹಸ್ತಾಂತರ: ನೂತನ ಹಂಗಾಮಿ ಕುಲಪತಿ ಪ್ರೊ.ನಾಮದೇವಗೌಡ ಸೋಮವಾರ ಅಧಿಕಾರ ಸ್ವೀಕರಿಸಿದರು. ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.