ADVERTISEMENT

ಮಾನಸಿಕ ಖಿನ್ನತೆಗೆ ಆತ್ಮಹತ್ಯೆ ಪರಿಹಾರವಲ್ಲ: ಡಾ.ಮಂಜುನಾಥ ಮಸಳಿ ಸಲಹೆ

ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 15:23 IST
Last Updated 20 ಸೆಪ್ಟೆಂಬರ್ 2024, 15:23 IST
ಸಿಂದಗಿ ಪಟ್ಟಣದ ಬಸವನಗರದಲ್ಲಿನ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆ ದಿನ ಕಾರ್ಯಕ್ರಮವನ್ನು ವಿಜಯಪುರ ನಗರದ ಮಾನಸಿಕ ತಜ್ಞವೈದ್ಯ ಮಂಜುನಾಥ ಮಸಳಿ ಉದ್ಘಾಟಿಸಿದರು
ಸಿಂದಗಿ ಪಟ್ಟಣದ ಬಸವನಗರದಲ್ಲಿನ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆ ದಿನ ಕಾರ್ಯಕ್ರಮವನ್ನು ವಿಜಯಪುರ ನಗರದ ಮಾನಸಿಕ ತಜ್ಞವೈದ್ಯ ಮಂಜುನಾಥ ಮಸಳಿ ಉದ್ಘಾಟಿಸಿದರು   

ಸಿಂದಗಿ: ‘ಆತ್ಮಹತ್ಯೆ ಪ್ರಕರಣಗಳು ಸ್ವ ಉದ್ಯೋಗಿಗಳು, ಮಹಿಳೆಯರು ಮತ್ತು ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತವೆ. ಚಿಕ್ಕ ಸಮಸ್ಯೆ ಆತ್ಮಹತ್ಯೆಗೆ ಕಾರಣವಾಗಿರುತ್ತದೆ. ಮಾನಸಿಕ ಖಿನ್ನತೆಗೆ ಆತ್ಮಹತ್ಯೆ ಪರಿಹಾರವಲ್ಲ’ ಎಂದು ವಿಜಯಪುರ ನಗರದ ಮಾನಸಿಕ ತಜ್ಞ ಡಾ. ಮಂಜುನಾಥ ಮಸಳಿ ಹೇಳಿದರು.

ಇಲ್ಲಿಯ ಬಸವನಗರದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದ ಸಭಾಭವನದಲ್ಲಿ ಗುರುವಾರ ಜಿಲ್ಲಾ ಆಸ್ಪತ್ರೆಯ ಮನೋರೋಗ ವಿಭಾಗ, ತಾಲ್ಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಮಾನಸಿಕ ಖಿನ್ನತೆಗೆ ಒಳಗಾದವರು ತಕ್ಷಣವೇ ಮಾನಸಿಕ ತಜ್ಞ ವೈದ್ಯರನ್ನು ಸಂಪರ್ಕಿಸಬೇಕು. ಅವರನ್ನು ಸಂಪರ್ಕಿಸಲು ಮುಜುಗರ ಉಂಟಾದರೆ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಸಹಾಯವಾಣಿ 14416 ಕರೆ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.
ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಮೊದಲನೆಯ ಮಂಗಳವಾರ ಮಾನಸಿಕ ತಜ್ಞ ವೈದ್ಯರು ಲಭ್ಯವಿರುತ್ತಾರೆ. ಚಿಕಿತ್ಸೆ ಪಡೆದುಕೊಳ್ಳಬಹುದು‘ ಎಂದರು. 

ADVERTISEMENT

‘ಆತ್ಮಹತ್ಯೆ ತಡೆಯಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ಜನರು ಮುಕ್ತವಾಗಿ ಮಾನಸಿಕ ಆರೋಗ್ಯ ಮತ್ತು ಖಿನ್ನತೆಯ ಬಗ್ಗೆ ಹಂಚಿಕೊಳ್ಳಬೇಕು’ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಸಲಹೆ ನೀಡಿದರು.

ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ, ಸಹನಿರ್ದೇಶಕಿ ಸಿಸ್ಟರ್ ಸಿಂತಿಯಾ 'ಡಿ' ಮೆಲ್ಲೊ ಮಾತನಾಡಿದರು.

 ಮಹಿಳೆಯರು, ಯುವಕ, ಯುವತಿಯರು, ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.