ವಿಜಯಪುರ: ಮಹಮ್ಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇರೆಗೆ ವಿಜಯಪುರದ ಗೋಳಗುಮ್ಮಟ ಠಾಣೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಘಟನಾ ಸ್ಥಳದ ಆಧಾರದ ಮೇಲೆ ಹುಬ್ಬಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಹುಬ್ಬಳ್ಳಿ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆ ಕೈಕೊಂಡಿರುತ್ತಾರೆ. ಅಲ್ಲದೇ, ಏ.15ರಂದು ವಿಜಯಪುರದಲ್ಲಿ ಮುಸ್ಲಿಂ ಸಮಾಜದಿಂದ ಯಾವುದೇ ಪ್ರತಿಭಟನೆ ಇರುವುದಿಲ್ಲ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಪ್ರತಿಕ್ರಿಯೆ ನೀಡಬಾರದು ಹಾಗೂ ಶಾಂತತೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ಕಟ್ಟೆಚ್ಚರ: ಶಾಸಕ ಯತ್ನಾಳ ಪ್ರಕರಣದ ವಿಷಯದ ಯಾವುದೇ ಸಮುದಾಯದ ವ್ಯಕ್ತಿಗಳು ಅನಗತ್ಯ ಊಹಾಪೋಹ ಅಥವಾ ಸುಳ್ಳು ಸುದ್ದಿ, ವದಂತಿ, ಅವಹೇಳನಕಾರಿ ಹೇಳಿಕೆಗಳ ಪೋಸ್ಟ್, ಇತ್ಯಾದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.