ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವುದನ್ನು ವಿರೋಧಿಸಿ ಅವರು ಬೆಂಬಲಿಗರು ಪಕ್ಷದ ವಿವಿಧ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ವಿಜಯಪುರ ನಗರ ಮಂಡಳಿ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಗೊಳಸಂಗಿ, ಬಿಜೆಪಿ ವಿಜಯಪುರ ನಗರ ಮಂಡಲ ರೈತ ಮೋರ್ಚಾಕ್ಕೆ ರಚ್ಚು ಬಿರಾದಾರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಸ್ಥಾನಕ್ಕೆ ಶಂಕರ ಹೂಗಾರ ರಾಜೀನಾಮೆ ನೀಡಿದ್ದಾರೆ.
ಯತ್ನಾಳ ಅವರ ಉಚ್ಛಾಟನೆಯನ್ನು ಸ್ವಾಗತಿಸಿ, ಅವರ ಸ್ವಕ್ಷೇತ್ರ ವಿಜಯಪುರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಸಿದ್ದೇಶ್ವರ ಗುಡಿ ಸೇರಿದಂತೆ ವಿವಿಧೆಡೆ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗಿದರು. ಸಿಹಿ ಹಂಚಿ ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.