ADVERTISEMENT

ಕಟೀಲ್‌ ಆಡಿಯೊ ಲೀಕ್‌: ತನಿಖೆಗೆ ಯತ್ನಾಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 12:28 IST
Last Updated 19 ಜುಲೈ 2021, 12:28 IST
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ    

ವಿಜಯಪುರ: ಮುಖ್ಯಮಂತ್ರಿ, ಸಚಿವರ ಬದಲಾವಣೆ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿರುವ ಆಡಿಯೊ ಲೀಕ್ ಪ್ರಕರಣ ಕುರಿತು ತನಿಖೆಯಾಗಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿರುವವರು ಸಿಸಿಬಿಯಲ್ಲಿದ್ದಾರೆ. ಹೀಗಾಗಿ ಎಲ್ಲವೂ ಸೋರಿಕೆಯಾಗುತ್ತಿದೆ ಎಂದು ಆರೋಪಿಸಿದರು.

ಖಾಸಗಿಯಾಗಿ ಮಾತನಾಡಿದ್ದನ್ನ ರೆಕಾರ್ಡ್ ಮಾಡಿಕೊಳ್ಳೊದು ಅಪರಾಧವಾಗುತ್ತದೆ. ವ್ಯಕ್ತಿಗತ ಗೌಪ್ಯತೆಗೆ ರಾಜ್ಯದಲ್ಲಿ ಅವಕಾಶವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಏನು ಬೇಕಾದದ್ದು ನಡೆಯುತ್ತಿದೆ. ಸಿಸಿಬಿಯವರು ಏನ್ ಮಾಡ್ತಿದ್ದಾರೆ? ಎಂದು ಪ್ರಶ್ನಿಸಿದರು.

ADVERTISEMENT

ರಾಜ್ಯ ಸರ್ಕಾರ ಡ್ರಗ್ಸ್ ಕೇಸ್, ಯುವರಾಜ್ ಕೇಸ್ ತನಿಖೆಯನ್ನು ಅರ್ಧಕ್ಕೆ ಬಿಟ್ಟದ್ದಾರೆ. ಸಿಸಿಬಿಯಲ್ಲಿರೋ ಹಿರಿಯ ಅಧಿಕಾರಿಗಳು ಈ ಬಗ್ಗೆ ಕಣ್ಣು ತೆರೆದು ನೋಡಬೇಕು ಎಂದರು.

ಗಡ್ಡದ ಮಹಿಮೆ:

‘ನನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿದ್ದೀನಿ. ಅದಕ್ಕಾಗಿ ಗಡ್ಡ ಬಿಟ್ಟಿದ್ದು, ಜುಲೈ 30ರ ಬಳಿಕ‌ ಗಡ್ಡದ ಮಹಿಮೆ ರಾಜ್ಯಕ್ಕೆ ತಿಳಿಯಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.