ADVERTISEMENT

ನನ್ನ ಗೆಲುವಿಗೆ ಯಡಿಯೂರಪ್ಪ ಕೊಡುಗೆ ಅಪಾರ: ಸಂಸದ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2025, 13:46 IST
Last Updated 31 ಮಾರ್ಚ್ 2025, 13:46 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ವಿಜಯಪುರ: ‘ಎಲ್ಲರ ಪ್ರಾಮಾಣಿಕ ಪ್ರಯತ್ನದಿಂದ ನಾನು ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದೇನೆ. ಚಿತ್ರದುರ್ಗಕ್ಕೆ  ಹೊಸಬನಾಗಿದ್ದರೂ ನನ್ನ ಗೆಲುವಿಗೆ ಕ್ಷೇತ್ರದ ನಾಯಕರು, ಕಾರ್ಯಕರ್ತರು ಶ್ರಮಿಸಿದರು’ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.

‘ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಸೋಲಿಸಲು ಯಡಿಯೂರಪ್ಪ ಪ್ರಯತ್ನಿಸಿದರು’ ಎಂಬ ಯತ್ನಾಳ ಹೇಳಿಕೆಗೆ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅವರು ಮೂರು ಬಾರಿ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿದ್ದಾರೆ. ನನ್ನ ಗೆಲುವಿಗೆ ಅವರ  ಕೊಡುಗೆ ತುಂಬಾ ಇದೆ. ಯಾರೂ ನನ್ನನ್ನು ಸೋಲಿಸಲು ಪ್ರಯತ್ನಿಸಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT