ವಿಜಯಪುರ: ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ಬುಧವಾರ ಸಂಜೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಫೈಸಲ್ ಇನಾಂದಾರ್ (21) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
‘ಈತ ಕೊಲ್ಹಾಪುರದಲ್ಲಿ ಕೆಲಸ ಮಾಡುತ್ತಿದ್ದ, ಎರಡು ದಿನಗಳ ಹಿಂದೆ ನಗರಕ್ಕೆ ಬಂದಿದ್ದ. ಅಪರಿಚಿತ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.