ADVERTISEMENT

ವಿಜಯಪುರ: ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2025, 12:33 IST
Last Updated 25 ಏಪ್ರಿಲ್ 2025, 12:33 IST
<div class="paragraphs"><p>ಅಶ್ನಾನ್‌ ಮಿರ್ಜಿ</p></div>

ಅಶ್ನಾನ್‌ ಮಿರ್ಜಿ

   

ವಿಜಯಪುರ: ಇಲ್ಲಿನ ಶಿಕಾರ ಕಾಲೊನಿಯ ಮಹಾನಗರ ಪಾಲಿಕೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಪ್ರಕಾಶ ಮಿರ್ಜಿ ಅವರ ಪುತ್ರ ಅಶ್ನಾನ್‌ ಮಿರ್ಜಿ(23) ಶುಕ್ರವಾರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಯುವಕ ಕಳೆದ ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ, ಪೋಷಕರು ವೈದ್ಯರ ಬಳಿ ಚಿಕಿತ್ಸೆ ನೀಡುತ್ತಿದ್ದರು. ಒಂದು ತಿಂಗಳ ಹಿಂದೆಯೂ ಒಮ್ಮೆ ಆತ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದ ಎಂದು ಪೋಷಕರು ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಮನೆಯಲ್ಲೇ ಕೊಠಡಿ ಬಾಗಿಲು ಹಾಕಿಕೊಂಡು ತಮ್ಮ ತಂದೆಯ ಪಿಸ್ತೂಲ್‌ನಿಂದಲೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.