ADVERTISEMENT

ಅಂಗಡಿಯಲ್ಲಿ ಮದ್ಯ ಮಾರಾಟ: ಬಂಧನ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 10:05 IST
Last Updated 28 ಅಕ್ಟೋಬರ್ 2017, 10:05 IST

ಶಹಾಪುರ: ತಾಲ್ಲೂಕಿನ ನಾಯ್ಕಲ್ ಗ್ರಾಮದ ಬೀಡಾ ಅಂಗಡಿಯಲ್ಲಿ ಗುರುವಾರ ತಡರಾತ್ರಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

‘ಭಾಗಪ್ಪ ನಾಯ್ಕಲ್ ಬಂಧಿತ ವ್ಯಕ್ತಿ. ಬೀಡಾ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ವಡಿಗೇರಾ ಠಾಣೆಯ ಪೊಲೀಸರು ದಾಳಿ ನಡೆಸಿ ₹10 ಸಾವಿರ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ವಡಿಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT