ADVERTISEMENT

ಕಸ್ತೂರಿ ಕರ್ನಾಟಕ ವೇದಿಕೆಯ ಸಮಾವೇಶ 10ರಂದು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 5:55 IST
Last Updated 5 ಅಕ್ಟೋಬರ್ 2012, 5:55 IST

ಯಾದಗಿರಿ: ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಮಟ್ಟದ ಸಮಾವೇಶವನ್ನು ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಅ. 10 ರಂದು ಮಧ್ಯಾಹ್ನ 12ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವಯ್ಯ ಸ್ವಾಮಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ನಗರದ ಮೈಲಾಪುರ ಅಗಸಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದವರೆಗೆ ಭುವನೇಶ್ವರಿ ದೇವಿಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ ಎಂದರು.

ಮೆರವಣಿಗೆಗೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಚಾಲನೆ ನೀಡುವರು. ಸಮಾವೇಶವನ್ನು ಶಾಸಕ ಡಾ. ಎ.ಬಿ. ಮಾಲಕರಡ್ಡಿ ಉದ್ಘಾಟಿಸುವರು. ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶಗೌಡ ಅಧ್ಯಕ್ಷತೆ ವಹಿಸಲಿದ್ದು, ಸಂಗನಬಸವ ಶಿವಾಚಾರ್ಯರು, ವೇದಮೂರ್ತಿ ಬಸವಯ್ಯ ಸ್ವಾಮೀಜಿ, ತ್ರಿಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.

ಕನ್ನಡಾಂಬೆಯ ಭಾವಚಿತ್ರಕ್ಕೆ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಪೂಜೆ ಸಲ್ಲಿಸಲಿದ್ದು, ಪುಸ್ತಕ ಮತ್ತು ಸಿಡಿಯನ್ನು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ನಾಗನಗೌಡ ಕಂದಕೂರ ಬಿಡುಗಡೆ ಮಾಡುವರು. ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರಡ್ಡಿ ಪಾಟೀಲ್ ತುನ್ನೂರ, ಜನಪದ ಕಲಾವಿದರನ್ನು ಸನ್ಮಾನಿಸುವರು. ಶ್ರೀನಿವಾಸರಡ್ಡಿ ಕಂದಕೂರ ಬಹುಮಾನ ವಿತರಣೆ ಮಾಡುವರು.

ಸಾಯಿಬಣ್ಣ ಬೋರಬಂಡ್ ಅನಾಥ ಮಕ್ಕಳಿಗೆ ನೋಟ್‌ಬುಕ್ ಬ್ಯಾಗ್ ವಿತರಣೆ ಮಾಡುವರು. ಶ್ರೀನಿವಾಸರಡ್ಡಿ ಚನ್ನೂರ, ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡುವರು. ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೊಲಿಗೆ ಯಂತ್ರ ವಿತರಿಸುವರು. ಕಾಡಾ ಅಧ್ಯಕ್ಷ ಗಿರೀಶ ಮಟ್ಟೆಣ್ಣವರ, ಅನಾಥ ಮಕ್ಕಳಿಗೆ ಬಟ್ಟೆ ವಿತರಣೆ ಮಾಡುವರು, ನಾಗರತ್ನ ಕುಪ್ಪಿ ಮತ್ತು ಮಂಜುಳಾ ಗೂಳಿ ಮುತ್ತೈದೆಯರಿಗೆ ಉಡಿ ತುಂಬುವರು. ಆರ್. ಚನ್ನಬಸ್ಸು ವನದುರ್ಗ, ಅಂಧರಿಗೆ ಬಟ್ಟೆ ವಿತರಣೆ ಮಾಡಲಿದ್ದಾರೆ ಎಂದರು.

ಸಮಾವೇಶದಲ್ಲಿ ನಾನಾ ಸಂಘಟನೆಯ ಕಾರ್ಯಕರ್ತರು ಮತ್ತು ಗಣ್ಯ ವ್ಯಕ್ತಿಗಳು ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ರಾಜು ಹಿರೇಮಠ, ಗೋವಿಂದರಡ್ಡಿ, ಖಾಜಾ ಮೈನುದ್ದೀನ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.