ADVERTISEMENT

ಗ್ರಾಮೀಣ ಬ್ಯಾಂಕ್ ಖಾಸಗೀಕರಣ ಖಂಡಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 12:18 IST
Last Updated 27 ಮಾರ್ಚ್ 2018, 12:18 IST
ಗ್ರಾಮೀಣ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಬಾರದು ಎಂದು ಒತ್ತಾಯಿಸಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರು ಸೋಮವಾರ ಯಾದಗಿರಿಯ ಪ್ರಾದೇಶಿಕ ಕಚೇರಿ ಎದುರು ಧರಣಿ ಆರಂಭಿಸಿದರು
ಗ್ರಾಮೀಣ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಬಾರದು ಎಂದು ಒತ್ತಾಯಿಸಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರು ಸೋಮವಾರ ಯಾದಗಿರಿಯ ಪ್ರಾದೇಶಿಕ ಕಚೇರಿ ಎದುರು ಧರಣಿ ಆರಂಭಿಸಿದರು   

ಯಾದಗಿರಿ: ಗ್ರಾಮೀಣ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಬಾರದು ಎಂದು ಒತ್ತಾಯಿಸಿ ನಗರದ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಎದುರು ಸೋಮವಾರ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳ ಸಂಘ ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಧರಣಿ ಆರಂಭಿಸಿದರು.

‘ಪ್ರೇರಕ ಬ್ಯಾಂಕಿನಲ್ಲಿರುವ ನಿವೃತ್ತಿ ಯೋಜನೆಯನ್ನು ಗ್ರಾಮೀಣ ಬ್ಯಾಂಕ್‌ಗಳ ನೌಕರರಿಗೂ ವಿಸ್ತರಿಸಬೇಕು. ಪ್ರೇರಕ ಬ್ಯಾಂಕಿನ ಸೇವಾ ನಿಯಮಗಳ ಮತ್ತು ನೇರ ನೇಮಕಾತಿ, ಬಡ್ತಿ ಯೋಜನೆಯನ್ನು ಜಾರಿಗೊಳಿಸಬೇಕು. ಕಂಪ್ಯೂಟರ್ ಇಂಕ್ರಿಮೆಂಟ್ ನೀಡ ಬೇಕು. ಅನುಕಂಪ ಆಧಾರಿತ ನೇಮಕಾತಿ ಜಾರಿಗೊಳಿಸಬೇಕು. ಗ್ರಾಮೀಣ ಬ್ಯಾಂಕುಗಳಲ್ಲಿರುವ ಗುತ್ತಿಗೆ ಆಧಾರಿತ ನೌಕರರನ್ನು ಕಾಯಂಗೊಳಿಸಬೇಕು’ ಎಂದು ಒತ್ತಾಯಿಸಿದರು.

ಅನೀಲ್‌ಕುಮಾರ್ ಕುಲಕರ್ಣಿ, ವರುಣಕುಮಾರ, ಎಚ್.ಎಸ್. ಮುಲ್ಲಾ, ಶರಣಗೌಡ ಬಿರಾದರ್, ಎಸ್.ಎಂ.ನೀಲಂಗಿ, ಎನ್‌.ಎಸ್.ಬಳಿಗಾರ್, ಪ್ರಶಾಂತ ದಂಡು, ಎಸ್.ಜಿ.ದೇಶಪಾಂಡೆ, ಅರುಣಕುಮಾರ ಧರಣಿಯಲ್ಲಿ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.