
ಯಾದಗಿರಿ: ಸಾಮಾಜಿಕ ಭದ್ರತಾ ಯೋಜನೆಗಳಡಿಯ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ಇತರೆ ಸೌಲಭ್ಯಗಳನ್ನು ನಿಗದಿತ ಅವಧಿಯೊಳಗೆ ಅರ್ಹ ಬಡ ಫಲಾನುಭವಿಗಳಿಗೆ ತಪ್ಪದೇ ದೊರಕಿಸಿ ಕೊಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ ಎಫ್.ಆರ್. ಜ ಮಾದಾರ, ತಪ್ಪಿದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮುಖ್ಯಮಂತ್ರಿಗಳ ನಿರ್ದೇಶನದ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ವಿವಿಧ ಕ್ರ ಮಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸ ಭೆ ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಕಾಲ ಯೋಜನೆಯಡಿ ಬರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಬೇಕು.
ವಿಶೇಷವಾಗಿ ಬಡ ಜನರಿಗೆ ಅನುಕೂಲವಾಗುವಂತಹ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ ಅರ್ಹ ಬಡ ಫಲಾನುಭವಿಗಳಿಗೆ ಸೌಲಭ್ಯ ದೊರೆಯುವಂತೆ ವಿಶೇಷ ತಹಸೀಲ್ದಾರರು ವಿಶೇಷ ಗಮನ ನೀಡಬೇ ಕು. ತಪ್ಪಿದಲ್ಲಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಒತ್ತುವರಿ ಗುರುತಿಸಿ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಜಮೀನು ಗುರುತಿಸುವ ಕಾರ್ಯ ಚುರುಕುಗೊಳಿಸಬೇಕು. ಗುರುತಿಸಿದ ಜಮೀನಿನಲ್ಲಿ ಸರ್ಕಾರಿ ಜಮೀನು ಇರುವ ಬಗ್ಗೆ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ವರದಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಭೂಸ್ವಾಧೀನ ಪ್ರಕರಣಗಳಲ್ಲಿ ವಿಳಂ ಬ ನೀತಿಯನ್ನು ಅನುಸರಿಸದಿರಲು ಸಂ ಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ವೇಳೆ ನಿಯಮಾವಳಿಯನ್ವಯ ಜಾತಿ ಪ್ರಮಾಣ ಪತ್ರ ಇದ್ದರೂ, ಹೊಸದಾಗಿ ಜಾತಿ ಪ್ರಮಾಣ ಪತ್ರ ಕೇಳಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವಂತಹ ದೂರುಗಳು ಬಂದಲ್ಲಿ ಆಯಾ ಕಾಲೇಜಿನ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಬೇಕು. ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸ ಬೇಕೆಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.