ADVERTISEMENT

ಭಕ್ತರ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2012, 9:10 IST
Last Updated 7 ಫೆಬ್ರುವರಿ 2012, 9:10 IST

ಯಾದಗಿರಿ:  ಹಾಲಗೇರಾದಲ್ಲಿ ಮಂಗಳವಾರ (ಫೆ.7) ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಜಾತ್ರೆಗೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ದೇವರಾಜ ನಾಯಕ ಹೇಳಿದರು.

ಉಳ್ಳೆಸುಗೂರ-ಹಾಲಗೇರಾ ರಸ್ತೆಯಲ್ಲಿ ಜಂಗಲ್ ಕಟಿಂಗ್ ಕಾರ್ಯಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಜಾತ್ರೆಗೆ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಂಗಲ್ ಕಟಿಂಗ್ ಮಾಡಿ, ಅನುಕೂಲ ಮಾಡಿಕೊಡುವಂತೆ ಕೆಡಿಪಿ ಸಭೆಯಲ್ಲಿಯೇ ಪ್ರಸ್ತಾಪ ಮಾಡಲಾಗಿತ್ತು. ಕೂಡಲೇ ರಸ್ತೆ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು. ಇದೀಗ ಜಾತ್ರೆಯ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಾರೆ.

ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಸ್ತೆ ಸುಧಾರಣೆ ಕಾರ್ಯವನ್ನು ಆರಂಭಿಸಲು ಅಧಿಕಾರಿಗಳನ್ನು ಒತ್ತಾಯಿಸಿದ ಪರಿಣಾಮ ಈ ಕಾರ್ಯ ಆರಂಭವಾಗಿದೆ ಎಂದು ಹೇಳಿದರು.

ಹಾಲಗೇರಾದಲ್ಲಿ ಅದ್ದೂರಿ ಜಾತ್ರೆ ನಡೆಯಲಿದ್ದು, ಆಗಮಿಸುವ ಭಕ್ತರಿಗೆ ಎಲ್ಲ ಸೌಕರ್ಯ ಒದಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದರಂಗವಾಗಿ ರಸ್ತೆ ಸುಧಾರಣೆ ಮಾಡಲಾಗಿದೆ ಎಂದು ತಿಳಿಸಿದರು. 

ರವಿ ಪಾಟೀಲ ಹೊರಟೂರ, ಪ್ರಿಯಾಂಕ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ದೊಡ್ಡಪ್ಪ, ಸಂಗಪ್ಪ, ಚಂದ್ರಾಮಪ್ಪ ಪೂಜಾರಿ ಹೊರಟೂರ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.