ADVERTISEMENT

ಮಕ್ಕಳ ಕಳ್ಳತನ ಸುಳ್ಳು ಸುದ್ದಿ: ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 19 ಮೇ 2018, 8:34 IST
Last Updated 19 ಮೇ 2018, 8:34 IST

ಯಾದಗಿರಿ: ಮಕ್ಕಳನ್ನು ಕಳ್ಳತನ ಮಾಡಿ ಮಾರುವ ಅಪರಿಚಿತ ವ್ಯಕ್ತಿಗಳು ಬಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಮಕ್ಕಳನ್ನು ಕಳ್ಳತನ ಮಾಡುವ ಅಪರಿಚಿತ ವ್ಯಕ್ತಿಗಳು ಎಲ್ಲಿಯೂ ಕಂಡು ಬಂದಿಲ್ಲ. ಅಲ್ಲದೆ ನೆರೆ ರಾಜ್ಯವಾದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲಿಯೂ ವರದಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ. ಠಾಣಾ ಸರಹದ್ದಿನಲ್ಲಿ ಗಸ್ತು ಹಾಗೂ ಚೆಕ್ ಪೋಸ್ಟ್ ಕರ್ತವ್ಯ ನಿರ್ವಹಿಸಲಾಗಿದೆ.ಯಾವುದೇ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಪಹರಣದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಒಂದು ವೇಳೆ ಇಂತಹ ಘಟನೆ ಬಗ್ಗೆ ಮಾಹಿತಿ ಬಂದರೆ ತಕ್ಷಣ ಪೊಲೀಸ ಠಾಣೆಗೆ ಮಾಹಿತಿ ನೀಡಿ. ಜಿಲ್ಲಾ ಪೊಲೀಸ ನಿಯಂತ್ರಣ ದೂರವಾಣಿ ಸಂಖ್ಯೆ 08473–253736 ಹಾಗೂ 94080803600 ಸಂಪರ್ಕಿಸಬೇಕು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.