ADVERTISEMENT

ಮತದಾನ ಅರಿವು ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಕ್ಯಾಂಡಲ್‌ ಹಿಡಿದು ಮತದಾನ ಜಾಗೃತಿ ಮೂಡಿಸಿದ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 5:06 IST
Last Updated 29 ಮಾರ್ಚ್ 2018, 5:06 IST
ಯಾದಗಿರಿಯ ಸುಭಾಷ್ ವೃತ್ತದಲ್ಲಿ ಬುಧವಾರ ರಾತ್ರಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಮತದಾನ ಅರಿವು ಕಾಲ್ನಡಿಗೆ ಜಾಥಾಕ್ಕೆ ಕ್ಯಾಂಡಲ್ ಹಚ್ಚುವ ಮೂಲಕ ಚಾಲನೆ ನೀಡಿದರು
ಯಾದಗಿರಿಯ ಸುಭಾಷ್ ವೃತ್ತದಲ್ಲಿ ಬುಧವಾರ ರಾತ್ರಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಮತದಾನ ಅರಿವು ಕಾಲ್ನಡಿಗೆ ಜಾಥಾಕ್ಕೆ ಕ್ಯಾಂಡಲ್ ಹಚ್ಚುವ ಮೂಲಕ ಚಾಲನೆ ನೀಡಿದರು   

ಯಾದಗಿರಿ: ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವ್ಯವಸ್ಥಿತ ಮತದಾರರಿಗೆ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳುವಿಕೆ (ಸ್ವೀಪ್) ಅರಿವು ಕಾರ್ಯಕ್ರಮಕ್ಕೆ ನಗರದ ಶಾಸ್ತ್ರಿ ವೃತ್ತದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ ಬುಧವಾರ ಚಾಲನೆ ನೀಡಿದರು.

ನಿಮ್ಮ ಮತ ನಿಮ್ಮ ಹಕ್ಕು ಎಂಬ ಧ್ಯೇಯ ವಾಕ್ಯದೊಂದಿಗೆ ಶಾಸ್ತ್ರಿವೃತ್ತದಿಂದ ಕ್ಯಾಂಡಲ್ ಹಿಡಿದು ಮತದಾರರರಲ್ಲಿ ಜಾಗೃತಿ ಮೂಡಿಸುತ್ತಾ ಕಾಲ್ನಡಿಗೆ ಜಾಥಾ ನಡೆಸಿದರು. ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಮತದಾನ ಕುರಿತು ಜನರಲ್ಲಿ ಅರಿವು ಮೂಡಿಸಿದರು. ನಂತರ ಕಾಲ್ನಡಿಗೆ ಜಾಥಾ ಅಲ್ಲಿಂದ ತರಕಾರಿ ಮಾರುಕಟ್ಟೆ, ಸ್ಟೇಷನ್ ಏರಿಯಾ ಮಾರ್ಗವಾಗಿ ಚಲಿಸಿ ಶಾಸ್ತ್ರಿವೃತ್ತ ತಲುಪಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಅವಿನಾಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಧಿಕಾರಿ ಶ್ರೀಕಾಂತ ಕುಲಕರ್ಣಿ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.