ಯಾದಗಿರಿ: ಆದ್ಯ ವಚನಕಾರ ದೇವರ ದಾಸಿಮಯ್ಯನವರ ಸಹಸ್ರಮಾನೋತ್ಸವವನ್ನು ಏಪ್ರಿಲ್ 8ರಿಂದ 10ರವರೆಗೆ ಸುರಪುರ ತಾಲ್ಲೂಕಿನ ಮುದನೂರಿನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಹಸ್ರಮಾನೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏಪ್ರಿಲ್ 9ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸರ್ಕಾರ ಈಗಾಗಲೇ ರೂ.20ಲಕ್ಷ ಬಿಡುಗಡೆ ಮಾಡಿದೆ. ಕಾರ್ಯಕ್ರಮದಲ್ಲಿ ಶಾಸಕರು, ಚುನಾಯಿತ ಜನಪ್ರತಿ ನಿಧಿಗಳು, ಸ್ಥಳೀಯ ಮುಖಂಡರು, ಸ್ವಾಮೀಜಿಗಳು, ಹಾಗೂ ಪದಾಧಿ ಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮಾರಂಭದ ಮುಖ್ಯ ವೇದಿಕೆ ಎದುರು ಸುಮಾರು 10 ಸಾವಿರ ಜನರಿಗೆ ಆಸನ ವ್ಯವಸ್ಥೆ, ಊಟ, ವಾಹನದ ವ್ಯವಸ್ಥೆ ಮಾಡಲಾಗುತ್ತಿದೆ. ಜನರಿಗೆ ತೊಂದರೆ ಆಗದಿರಲು ಕುಡಿ ಯುವ ನೀರು, ಬಸ್ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಮಾರಂಭದ ಮುಖ್ಯ ವೇದಿಕೆ ಹಾಗೂ ಅಲ್ಲಿನ ವ್ಯವಸ್ಥೆಗಳನ್ನು ನೋಡಿ ಕೊಳ್ಳಲು ಸಹಾಯಕ ಆಯುಕ್ತೆ ಕವಿತಾ ಮನ್ನಿಕೇರಿ ಅವರಿಗೆ ಸೂಚನೆ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿ ಸುವುದು ಹಾಗೂ ವಿವಿಧ ಇಲಾಖೆಯ ಜೊತೆ ಸಂಪರ್ಕಿಸುವ ಜವಾಬ್ದಾರಿ ಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶಂಕರ ಸೋನಾರಗೆ ನೀಡಲಾಯಿತು. ಸಮಾರಂಭವನ್ನು ಯಶಸ್ವಿಯಾಗಿ ನಡೆಸಲು ಜಿಲ್ಲಾ ಮಟ್ಟದ ಅಧಿಕಾರಿ ಗಳನ್ನು ಒಳಗೊಂಡ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿ ನೀಡಿದ ಜವಾಬ್ದಾರಿ ಯನ್ನು ಅಚ್ಚುಕಟ್ಟಾಗಿ ನಿರ್ವಹಿಸ ಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಬ್ಯಾನರ್, ಪೋಸ್ಟರ್, ಆಮಂತ್ರಣ ಪತ್ರಿಕೆಗಳು, ಸುಣ್ಣಬಣ್ಣ ಹಾಗೂ ದೀಪಾಲಂಕಾರ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಿದರು.
ಸಹಾಯಕ ಆಯುಕ್ತೆ ಕವಿತಾ ಮನ್ನಿಕೇರಿ, ಡಿಎಸ್ಪಿ ಎಸ್.ಡಿ. ಬಾಗ ವಾಡಮಠ, ಆಹಾರ ಮತ್ತು ನಾಗರಿಕರ ಪೂರೈಕೆ ಇಲಾಖೆ ಉಪ ನಿರ್ದೇಶಕ ಶ್ರೀಶೈಲ ಕಂಕನವಾಡಿ, ಪಂಚಾಯತ್ ರಾಜ್ ಎಂಜಿನಿಯ ರಿಂಗ್‌ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚನ್ನಸಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.