ADVERTISEMENT

ರಾಷ್ಟ್ರಕವಿ ಶಿವರುದ್ರಪ್ಪ ನಿಧನಕ್ಕೆ ಸಂತಾಪ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2013, 6:30 IST
Last Updated 24 ಡಿಸೆಂಬರ್ 2013, 6:30 IST

ಕೊಪ್ಪಳ: ರಾಷ್ಟ್ರ ಕವಿ ಜಿ.ಎಸ್‌.ಶಿವರುದ್ರಪ್ಪ ಅವರ ನಿಧನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು, ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದದವರು ಸಂತಾಪ ಸೂಚಿಸಿದ್ದಾರೆ.

ಜಿ.ಎಸ್. ಶಿವರುದ್ರಪ್ಪ ಅವರ ನಿಧನದಿಂದ ಕನ್ನಡ ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಂಸದ ಶಿವರಾಮಗೌಡ ಶೋಕಿಸಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ನಾಡೋಜ, ಪಂಪ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನ­ರಾದ ಶಿವರುದ್ರಪ್ಪ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರ ಬಡ­ವಾ­ಗಿದೆ. ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕಸಾಪ ಶೋಕ: ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ಸಂತಾಪ ಸಭೆಯಲ್ಲಿ ಮಾತನಾಡಿದ ಸಾಹಿತಿ ಅಲ್ಲಮ­ಪ್ರಭು ಬೆಟ್ಟದೂರು, ಶಿವರುದ್ರಪ್ಪನವರು ಒಬ್ಬ ಪ್ರಭುದ್ದ ಕವಿ. ಎಲ್ಲರನ್ನು ಸಮಾನ ಮನೋಭಾವದಿಂದ ಕಾಣುವ ಗುಣವುಳ್ಳವರಾಗಿದ್ದ ಅವರು, ಜ್ಞಾನಪೀಠ ಪ್ರುರಸ್ಕೃತ ಕವಿಗಳ ಸಾಲಿನಲ್ಲಿ ನಿಲ್ಲುವ ವ್ಯಕ್ತಿತ್ವ ಬೆಳಸಿಕೊಂಡಿದ್ದರು ಎಂದರು.

ಅಕ್ಬರ್ ಸಿ. ಕಾಲಿಮಿರ್ಚಿ, ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೀರಣ್ಣ ನಿಂಗೋಜಿ, ತಾಲ್ಲೂಕು ಘಟಕದ ಅಧ್ಯಕ್ಷ ಶಿ.ಕಾ.ಬಡಿಗೇರ, ವೀರಕನ್ನಡಿಗ ಸಂಘದ ಅಧ್ಯಕ್ಷರಾದ ಶಿವಾನಂದ ಹೊದ್ಲೂರು, ಯುವ ಸಾಂಕ್ಕೃತಿಕ ಸೇವಾ ಸಂಘದ ಅಧ್ಯಕ್ಷರಾದ ಆನಂದ ಹಳ್ಳಿಗುಡಿ, ಶಿಕ್ಷಕರಾದ ಬಸಪ್ಪ ಬಾರಕೇರ, ಎನ್.ಜಾಜೂ, ಭಾಗವಹಿಸಿದ್ದರು.

ಶೋಕ: ಕರ್ನಾಟಕ ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ, ಜಯ ಕರ್ನಾಟಕ ಸಂಘಟನೆಯ ಉತ್ತರ ಕರ್ನಾಟಕ ಭಾಗದ ಕಾರ್ಯಾಧ್ಯಕ್ಷ ವಿಜಯಕುಮಾರ ಕವಲೂರು, ಹಿಂದೂಸ್ತಾನಿ ಗಾಯಕ ಸದಾಶಿವ ಪಾಟೀಲ, ಭಾರತ ವಿದ್ಯಾರ್ಥಿ ಫೆಡರೇಶ­ನ್‌ನ ಜಿಲ್ಲಾ ಸಮಿತಿ ಅಧ್ಯಕ್ಷ ಅಮರೇಶ ಕಡಗದ ಮತ್ತಿತರರು ಸಹ  ಜಿ.ಎಸ್‌.ಶಿವರುದ್ರಪ್ಪ ಅವರ ನಿಧನಕ್ಕೆ ಶೋಕ ಜಿಎಸ್ಎಸ್ ನಿಧನಕ್ಕೆ ತೀವ್ರ ಸಂತಾಪ

ಹನುಮಸಾಗರ ವರದಿ
ಇಲ್ಲಿನ ಸಾರ್ವಜನಿಕ ಗ್ರಂಥಾಲಯದಲ್ಲಿ ಸೋಮವಾರ ಜಿ.ಎಸ್.ಶಿವರುದ್ರಪ್ಪ ಅವರ ನಿಧನದ ಪ್ರಯುಕ್ತ ಸಂತಾಪ ಸೂಚಕ ಸಭೆ ನಡೆಯಿತು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದಪ್ಪ ಹಕ್ಕಿ, ಅಬ್ದುಲ್‌ಕರೀಮ ವಂಟೆಳಿ, ಪಿ.ಕೆ.ಪುರೋಹಿತ, ಚಂದಾ­ಲಿಂಗಪ್ಪ ಹಳ್ಳೂರ, ಅಮರೇಶ ತಮ್ಮಣ್ಣವರ, ಸಿದ್ದಪ್ಪ ಹಕ್ಕಿ, ಪ್ರಹ್ಲಾದ ಮಠದ ಇದ್ದರು. ಲಂಕೇಶ ವಾಲಿಕಾರ ನಿರೂಪಿಸಿದರು.

ಕುಕನೂರು ವರದಿ
ರಾಷ್ಟ್ರ ಕವಿ ಡಾ.ಜಿ.ಎಸ್‌.ಶಿವರುದ್ರಪ್ಪ ಅವರ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ ಶೋಕ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಕೆ.ಬಿ. ಬ್ಯಾಳಿ, ವೈ.ಚಮ­ನ್‌ಸಾಬ, ಕುಕನೂರು ಹೋಬಳಿ ಕ.ಸಾ.ಪ ಅಧ್ಯಕ್ಷ ಹನುಮಂತಪ್ಪ ಜಳಕಿ, ಸಾಹಿತಿ ರಂ.ರಾ.ನಿಡಗುಂದಿ,  ಎ.ಪಿ.ಮುಧೋಳ, ಆರ್‌.ಪಿ.ರಾಜೂರ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿವಿ ಪರೀಕ್ಷೆ ಮುಂದೂಡಿಕೆ

ಗುಲ್ಬರ್ಗ: ಸಾಹಿತಿ ಡಾ.ಜಿ.ಎಸ್. ಶಿವರುದ್ರಪ್ಪ ನಿಧನದ ಹಿನ್ನೆಲೆಯಲ್ಲಿ ಡಿ. 24ರಂದು ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಗುಲ್ಬರ್ಗ ವಿಶ್ವವಿದ್ಯಾಲಯ ಮುಂದೂಡಿದೆ.

ರಾಜ್ಯ ಸರ್ಕಾರ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಬಿ.ಎ, ಬಿ.ಎಸ್ಸಿ, ಬಿ.ಕಾಂ ಹಾಗೂ ಎಂಸಿಎ ಮತ್ತು ಎಂಬಿಎ ಪರೀಕ್ಷೆ­ಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕ­ವನ್ನು ತಿಳಿಸಲಾಗುವುದು ಎಂದು ವಿ.ವಿ ಕುಲಸಚಿವ (ಪರೀಕ್ಷಾಂಗ) ಪ್ರೊ.ಎಸ್.ವಿ.ಹಲ್ಸೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT