ADVERTISEMENT

ರೈತರ ಸಾಲಮನ್ನಾಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜೂನ್ 2018, 9:34 IST
Last Updated 19 ಜೂನ್ 2018, 9:34 IST
ಯಾದಗಿರಿಯ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ  ರೈತ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು
ಯಾದಗಿರಿಯ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು   

ಯಾದಗಿರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿತು.

‘ಅಧಿಕಾರಕ್ಕೆ ಬಂದ 15 ದಿನಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದರು.  ಆದರೆ, ಕುಂಟು ನೆಪಗಳಲ್ಲೇ ದಿನದೂಡುತ್ತಿದ್ದಾರೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಅಯ್ಯಣ್ಣ ಹಾಲಭಾವಿ ಆರೋಪಿಸಿದರು.

‘ಸಮ್ಮಿಶ್ರ ಸರ್ಕಾರ ರಚನೆ ಆದ ಬಳಿಕ ರಾಜ್ಯದಲ್ಲಿ 70 ಕ್ಕೂ ಹೆಚ್ಚು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರವು ರೈತರ ಆತ್ಮಹತ್ಯೆ ತಡೆಯುವಲ್ಲಿ ವಿಫಲವಾಗಿದೆ’ ಎಂದು ದೂರಿದರು.

ADVERTISEMENT

ಕೂಡಲೇ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಾಗರತ್ನಾ ಪಾಟೀಲ್, ಮಹಾದೇವಿ ಬೇವಿನಾಳ ಮಠ, ಹಣಮಂತ ಕೊಂಗಂಡಿ, ಚಂದ್ರಕಲಾ ವಡಗೇರಿ, ಶರಣು ಮಂದ್ರವಾಡ, ಮಲ್ಲಣ್ಣ ನಿಲಹಳ್ಳಿ, ಬಸವರಾಜ, ಸಾಹೇಬಗೌಡ, ರಮೇಶ, ಶರಣಪ್ಪ, ಮರೆಮ್ಮ, ಹಣಮಂತಿ, ಶಿಲ್ಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.