ADVERTISEMENT

ವಡಗೇರಾ: ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2017, 10:50 IST
Last Updated 1 ಅಕ್ಟೋಬರ್ 2017, 10:50 IST

ಶಹಾಪುರ: ತಾಲ್ಲೂಕಿನಲ್ಲಿ ಕಳೆದ ಎರಡು ದಿನದಿಂದ ಸುರಿದ ಮಳೆ ರೈತರ ಮೊಗದಲ್ಲಿ ಖುಷಿ ತಂದಿದೆ. ಹಿಂಗಾರು ಬಿತ್ತನೆಗೆ ರೈತರು ಸಿದ್ಧರಾಗಿದ್ದು, ಹದಭರಿತ ಮಳೆಯಿಂದ ಹೆಚ್ಚು ಅನುಕೂಲವಾಗಿದೆ. ಜೋಳ, ಕಡಲೆ, ಶೇಂಗಾ ಬಿತ್ತನೆಯ ಕಾರ್ಯ ಚುರುಕುಗೊಳ್ಳಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಡಾ.ದಾನಪ್ಪ ಕತ್ನಳ್ಳಿ ತಿಳಿಸಿದ್ದಾರೆ.

ಶುಕ್ರವಾರ ಹಾಗೂ ಶನಿವಾರ ಎರಡು ದಿನದಲ್ಲಿ ವಡಗೇರಾ ಹೋಬಳಿ ವ್ಯಾಪ್ತಿಯಲ್ಲಿ ದಾಖಲೆಯ 67 ಮಿ.ಮೀ ಮಳೆಯಾಗಿದೆ. ಅದರಂತೆ ಭೀಮರಾಯನಗುಡಿ 39, ಗೋಗಿ 42, ದೋರನಹಳ್ಳಿ 24, ಹಯ್ಯಾಳ 21, ಹತ್ತಿಗೂಡೂರ 38 ಮಿ.ಮೀ ಮಳೆಯಾಗಿದೆ.

ಈಗಾಗಲೇ ಬಿತ್ತನೆ ಮಾಡಿರುವ ತೊಗರಿ, ಹತ್ತಿ, ಮೆಣಸಿನಕಾಯಿ ಬೆಳೆಗೆ ಅನುಕೂಲವಾಗಿದೆ. ಸದ್ಯಕ್ಕೆ ಮಳೆಯ ತೇವಾಂಶದ ಕೊರತೆ ಇಲ್ಲ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.