ADVERTISEMENT

ವಿದ್ಯಾರ್ಥಿಗಳ ಜೀವನ ಅಮೂಲ್ಯ: ಶಾಂತಕುಮಾರ

ಲಾಡ್ಲಾಪುರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 8:27 IST
Last Updated 17 ಮಾರ್ಚ್ 2018, 8:27 IST

ವಾಡಿ: ‘ವಿದ್ಯಾರ್ಥಿಗಳ ಜೀವನ ಅಮೂಲ್ಯವಾದುದು. ಅದನ್ನು ಸದ್ಬಳಕೆ ಮಾಡಿಕೊಂಡಾಗ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ಕನ್ನಡ ಸಾಹಿತ್ಯ ಪರಿಷತ್‌ ನಾಲವಾರ ವಲಯ ಗೌರವ ಕಾರ್ಯದರ್ಶಿ ಶಾಂತಕುಮಾರ ಎಣ್ಣಿ ಹೇಳಿದರು.

ಸಮೀಪದ ಲಾಡ್ಲಾಪುರ ಸರ್ಕಾರಿ ಫ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಾರ್ಷಿಕೋತ್ಸವ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾ ರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಅಭ್ಯಾಸದ ಜೊತೆಯಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪರೀಕ್ಷೆಯ ಅಂಕಗಳೇ ಮಾನದಂಡವಲ್ಲ. ಒಳ್ಳೆಯ ಅಭಿರುಚಿ, ಹಿರಿಯರಿಗೆ ಗೌರವ ನೀಡುವ ಮನೋಭಾವ, ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕು ಎನ್ನುವ ಹಂಬಲ ವಿದ್ಯಾರ್ಥಿಗಳನ್ನು ಉನ್ನತ ವ್ಯಕ್ತಿತ್ವದತ್ತ ತೆಗೆದುಕೊಂಡು ಹೋಗುತ್ತವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.