ADVERTISEMENT

ಯಾದಗಿರಿ: ಕೃಷ್ಣಾ ನದಿಗೆ 2.37 ಲಕ್ಷ ಕ್ಯುಸೆಕ್ ನೀರು; ಮತ್ತೆ ಪ್ರವಾಹ ಭೀತಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 19:30 IST
Last Updated 16 ಆಗಸ್ಟ್ 2020, 19:30 IST
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 22 ಮುಖ್ಯಕ್ರಷ್ಟ್‌ಗೇಟ್‌ಗಳಿಂದ 2.37 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ 22 ಮುಖ್ಯಕ್ರಷ್ಟ್‌ಗೇಟ್‌ಗಳಿಂದ 2.37 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ   

ಹುಣಸಗಿ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿಸುತ್ತಿರುವುದರಿಂದ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

‘ಕೃಷ್ಣಾ ನದಿ ಪಾತ್ರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಸವಸಾಗರ ಜಲಾಶಯಕ್ಕೆಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆದ್ದರಿಂದ ಜಲಾಶಯದ ಮಟ್ಟ ಕಾಯ್ದುಕೊಂಡು ಹೆಚ್ಚಿನ ನೀರನ್ನು ನದಿಗೆ ಹರಿಸಲಾಗುತ್ತಿದೆ’ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ ತಿಳಿಸಿದರು.

ಭಾನುವಾರ ಬೆಳಿಗ್ಗೆ 80 ಸಾವಿರ ಕ್ಯುಸೆಕ್ ನೀರು ಒಳಹರಿವು ಇದ್ದು, 71 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿತ್ತು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿದೆ ಎಂಬ ಮಾಹಿತಿ ಹಿರಿಯ ಅಧಿಕಾರಿಗಳಿಗೆ ಈ ಮೊದಲೇ ಲಭ್ಯವಾಗಿತ್ತು. ಅದರಂತೆ ಸಂಜೆ ಹೊತ್ತಿಗೆ 1.90 ಲಕ್ಷ ಕ್ಯುಸೆಕ್ ಒಳಹರಿವು ಬರುತ್ತಿದ್ದರಿಂದಾಗಿ ಜಲಾಶಯದ ಮಟ್ಟ 491 ಮೀಟರ್ ಕಾಯ್ದುಕೊಂಡು 22 ಗೇಟ್‌ಗಳ ಮೂಲಕ 2.37 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ನದಿ ತೀರ ಗ್ರಾಮಗಳ ಹಳ್ಳಿಗಳ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ ಹೆಚ್ಚಾಗಿದೆ.

ADVERTISEMENT

‘ಇತಿಹಾಸ ಪ್ರಸಿದ್ಧ ನಾರಾಯಣಪುರ ಛಾಯಾಭಗವತಿ ದೇವಸ್ಥಾನದ ಮುಂಭಾಗದಲ್ಲಿರುವ ಮುಖಮಂಟಪಕ್ಕೆ ನೀರು ನುಗ್ಗಿದೆ’ ಎಂದು ದೇವಸ್ಥಾನದ ಅರ್ಚಕ ಚಿದಂಬರಭಟ್ಟ ಜೋಶಿ ತಿಳಿಸಿದರು.

‘ನದಿ ತೀರದಲ್ಲಿರುವ ಗ್ರಾಮಗಳ ಜನರು ನದಿಯತ್ತ ತೆರಳದಂತೆ ಎಚ್ಚರಿಕೆಯಿಂದ ಇರಬೇಕು’ ಎಂದು ಡ್ಯಾಂ ಡಿವಿಜನ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.