ADVERTISEMENT

₹25 ಸಾವಿರ ಮೌಲ್ಯದ ವಿವಿಧ ಬಗೆಯ ಅಕ್ರಮ ಮದ್ಯ ವಶ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 15:35 IST
Last Updated 15 ಜೂನ್ 2021, 15:35 IST
ಅಕ್ರಮವಾಗಿ ಸಂಗ್ರಹಿಸಿಟ್ಟ ಮಾರಾಟ ಮಾಡುತ್ತಿದ್ದ ಕೆಂಭಾವಿ ಪೋಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡರು.
ಅಕ್ರಮವಾಗಿ ಸಂಗ್ರಹಿಸಿಟ್ಟ ಮಾರಾಟ ಮಾಡುತ್ತಿದ್ದ ಕೆಂಭಾವಿ ಪೋಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡರು.   

ಕೆಂಭಾವಿ: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ₹25 ಸಾವಿರ ಮೌಲ್ಯದ ವಿವಿಧ ಬಗೆಯ ಮದ್ಯದ ಬಾಟಲಿಗಳನ್ನು ಸೋಮವಾರ ರಾತ್ರಿ ಡಿವೈಎಸ್‌ಪಿ ವೆಂಕಟೇಶ ಉಗಿಬಂಡಿ ನೇತೃತ್ವದ ತಂಡ ಬೈಚಬಾಳ ಗ್ರಾಮದಲ್ಲಿ ವಶಪಡಿಸಿಕೊಂಡಿದೆ.

ಖಚಿತ ಮಾಹಿತಿ ಮೇರೆಗೆ ಬೈಚಬಾಳ ಗ್ರಾಮದ ಕಿರಾಣಿ ಅಂಗಡಿಯೊಂದರ ಪಕ್ಕದಲ್ಲಿ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ವಿವಿಧ ಬಗೆಯ ಮದ್ಯ ಜಪ್ತಿ ಮಾಡಲಾಗಿದೆ. ಘಟನೆ ಸಂಬಂಧ ಮಹಿಳೆ ಸೇರಿದಂತೆ ಮೂವರ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ಗಜಾನನ ಬಿರಾದಾರ, ಪೊಲೀಸ್ ಸಿಬ್ಬಂದಿ ಶಿವಲಿಂಗ, ಶಂಕರಗೌಡ, ಪ್ರಕಾಶ, ಸುಭಾಸ್, ಚಂದಪ್ಪ, ಚನ್ನಪ್ಪಗೌಡ ಹಾಗೂ ಮಂಜುನಾಥ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.