ADVERTISEMENT

25,663 ವರದಿ ನೆಗೆಟಿವ್, 688 ವರದಿ ಬಾಕಿ

ಜಿಲ್ಲೆಯ 971 ಸೋಂಕಿತರಲ್ಲಿ 868 ಜನ ಗುಣಮುಖ: ಎಡಿಸಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 15:40 IST
Last Updated 5 ಜುಲೈ 2020, 15:40 IST

ಯಾದಗಿರಿ: ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಜುಲೈ 5ರವರೆಗೆ 971 ವರದಿ ಪಾಸಿಟಿವ್ ಬಂದಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಭಾನುವಾರದ 120 ನೆಗೆಟಿವ್ ವರದಿ ಸೇರಿ 25,663 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 269 ಮಾದರಿಗಳು ಸೇರಿದಂತೆ 688 ಮಾದರಿಗಳ ವರದಿ ಬರಬೇಕಿದೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟ 971 ವ್ಯಕ್ತಿಗಳ ಪೈಕಿ ಭಾನುವಾರ ಮತ್ತೆ 3 ಜನ ಗುಣಮುಖರಾಗಿದ್ದು, ಜುಲೈ 5ರವರೆಗೆ 868 ಜನ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 102 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ 90 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದ್ದು, ಇದರಲ್ಲಿ 3 ಕಂಟೇನ್‍ಮೆಂಟ್ ಝೋನ್‍ಗಳನ್ನು ತೆರವುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.