ADVERTISEMENT

2.60 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ: ಪ್ರವಾಹದ ಭೀತಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 5:39 IST
Last Updated 17 ಆಗಸ್ಟ್ 2020, 5:39 IST

ಯಾದಗಿರಿ: ನಾರಾಯಣಪುರ ಬಸವಸಾಗರ ಜಲಾಶಯದಿಂದ ಭಾನುವಾರ ರಾತ್ರಿ 11 ಗಂಟೆಯಿಂದ 2.60 ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ ಎಂದು ಡ್ಯಾಂ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಕೃಷ್ಣಾ ನದಿ ಪಾತ್ರದ 23 ಹಳ್ಳಿಗಳಿಗೆ ಪ್ರವಾಹದ ಭೀತಿ ಎದುರಾಗಿದೆ.

ಬೆಳಿಗ್ಗೆಯಿಂದ 80 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿತ್ತು. ಸಂಜೆ ವೇಳೆಗೆ 2.37 ಲಕ್ಷ ಕ್ಯುಸೆಕ್ ಹರಿಸಲಾಗುತ್ತಿತ್ತು. ನಂತರ ರಾತ್ರಿಯಿಂದ 2.60 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ.‌ ಇದು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಕೊಳ್ಳೂರ ಎಂ ಸೇತುವೆ ಮುಳುಗಡೆ: 2.60. ಲಕ್ಷ ಕ್ಯುಸೆಕ್ ನೀರು ಕೃಷ್ಣಾ ನದಿಗೆ ಹರಿಸುತ್ತಿರುವುದರಿಂದ ಶಹಾಪುರ ತಾಲ್ಲೂಕಿನ ಕೊಳ್ಳೂರ ಎಂ ಸೇತುವೆ ಮುಳುಗಡೆಯಾಗಿದೆ. ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.

ADVERTISEMENT

ಆಲಮಟ್ಟಿ ಅಣೆಕಟ್ಟಿನಿಂದ ಕೃಷ್ಣ ನದಿಗೆ ಹೊರಹರಿವು 2.20 ಲಕ್ಷ ಕ್ಯುಸೆಕ್ ನೀರು ಹರಿಸುತ್ತಿದ್ದು, ಇದರಿಂದ ನಾರಾಯಣಪುರ ಡ್ಯಾಂನಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.