ADVERTISEMENT

34 ಜನರಿಗೆ ಕೋವಿಡ್‌ ದೃಢ

ಜಿಲ್ಲೆಯ 1,535 ಸೋಂಕಿತರಲ್ಲಿ 1,159 ಜನ ಗುಣಮುಖ

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 17:38 IST
Last Updated 16 ಜುಲೈ 2020, 17:38 IST
ಯಾದಗಿರಿಯ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾದವರಿಗೆ ಪ್ರಮಾಣ ಪತ್ರ ನೀಡಲಾಯಿತು
ಯಾದಗಿರಿಯ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾದವರಿಗೆ ಪ್ರಮಾಣ ಪತ್ರ ನೀಡಲಾಯಿತು   

ಯಾದಗಿರಿ: ಜಿಲ್ಲೆಯಲ್ಲಿ ಗುರುವಾರ ಮತ್ತೆ 34 ಜನರಿಗೆ ಕೋವಿಡ್‌ ದೃಢವಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 1,535ಕ್ಕೆ ಏರಿಕೆಯಾಗಿದೆ. ಆದರೆ,ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 1,535 ವ್ಯಕ್ತಿಗಳ ಪೈಕಿ ಗುರುವಾರ ಮತ್ತೆ 62 ಜನ ಗುಣಮುಖರಾಗಿದ್ದು, ಜುಲೈ 16ರವರೆಗೆ 1,159 ಜನ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 375 ಪ್ರಕರಣಗಳು ಸಕ್ರಿಯವಾಗಿವೆ.

ಗುರುವಾರ ಸೋಂಕು ದೃಢಪಟ್ಟವರಲ್ಲಿ ಗುರುಮಠಕಲ್‌, ಶಹಾಪುರ ತಾಲ್ಲೂಕುನವರು ಹೆಚ್ಚಿದ್ದಾರೆ. ನಂತರ ಸುರಪುರ, ಹುಣಸಗಿ ತಾಲ್ಲೂಕಿನವರಿಗೂ ಸೋಂಕು ತಗುಲಿದೆ.

ಕೊರೊನಾ ಸೋಂಕು ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಗುರುವಾರದ 290 ನೆಗೆಟಿವ್ ವರದಿ ಸೇರಿ ಈವರೆಗೆ 28,679 ಮಾದರಿಗಳ ವರದಿ ನೆಗೆಟಿವ್ ಬಂದಿವೆ. 63 ಮಾದರಿಗಳ ವರದಿ ಬರಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ADVERTISEMENT

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3,109 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 4,702 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 116 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದ್ದು, ಇದರಲ್ಲಿ 24 ಕಂಟೇನ್‍ಮೆಂಟ್ ಝೋನ್‍ಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ 3 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಗಳಲ್ಲಿ 131 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.