ADVERTISEMENT

ಸುರಪುರ: 5,188 ವಿದ್ಯಾರ್ಥಿಗಳ ನೋಂದಣಿ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 1:34 IST
Last Updated 28 ಮಾರ್ಚ್ 2022, 1:34 IST

ಸುರಪುರ: ‘ತಾಲ್ಲೂಕಿನಾದ್ಯಂತ ಮಾರ್ಚ್ 28ರಿಂದ ಏ. 11ರ ವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರೆಡ್ಡಿ ತಿಳಿಸಿದರು.

‘ನಗರದ ಸರ್ಕಾರಿ ಬಾಲಕರ ಪ.ಪೂ. ಕಾಲೇಜು, ಸರ್ಕಾರಿ ಬಾಲಕಿಯರ ಪ.ಪೂ. ಕಾಲೇಜು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪ್ರೌಢಶಾಲೆ, ಕುಂಬಾರಪೇಟೆಯ ಪ್ರೇರಣಾ ಶಾಲೆ, ರಂಗಂಪೇಟೆಯ ಸರ್ಕಾರಿ ಪ.ಪೂ. ಕಾಲೇಜು, ಕೆಂಭಾವಿಯ ಹೇಮರಡ್ಡಿ ಮಲ್ಲಮ್ಮ ಪ್ರೌಢಶಾಲೆ ಸೇರಿದಂತೆ 18 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದರು.

’18 ಜನ ಸ್ಥಾನಿಕ ಜಾಗ್ರತಾ ದಳ ಹಾಗೂ 9 ಜನ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಎಲ್ಲ ಕೇಂದ್ರಗಳನ್ನು ಸಾನಿಟೈಸ್ ಮಾಡಲಾಗಿದೆ. ಸಿಸಿಟಿವಿ ಕ್ಯಾಮೆರಾ ಸಹ ಅಳವಡಿಸಲಾಗಿದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇದೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಒಟ್ಟು 5,188 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಪೈಕಿ 2,736 ಬಾಲಕರು ಮತ್ತು 2,452ಬಾಲಕಿಯರು ಇದ್ದಾರೆ. ಒಂದು ಕೋಣೆಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.

‘ನಗರದ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ 312 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಅದರಲ್ಲಿ 185 ಬಾಲಕರು, 127 ಬಾಲಕಿಯರು ಇದ್ದಾರೆ. 16 ಕೋಣೆಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಮುಖ್ಯ ಶಿಕ್ಷಕ ಅನಂತಮೂರ್ತಿ ಡಬೀರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.