ADVERTISEMENT

ಮುರಮ್ ಅಕ್ರಮ ಸಾಗಣೆ: ಆರೋಪ

​ಪ್ರಜಾವಾಣಿ ವಾರ್ತೆ
Published 14 ಜನವರಿ 2018, 7:43 IST
Last Updated 14 ಜನವರಿ 2018, 7:43 IST

ಶಹಾಪುರ: ‘ತಾಲ್ಲೂಕಿನ ಮಹಲರೋಜಾ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಖಾಸಗಿ ಕಂಪನಿಯವರು ಅಕ್ರಮವಾಗಿ ಮುರಮ್ (ಗಡಸುಮಣ್ಣು) ಸಾಗಣೆ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ದಲಿತ ಮುಖಂಡ ಈಶ್ವರ ರೋಜಾ ಆಗ್ರಹಿಸಿದ್ದಾರೆ.

ಈ ಕುರಿತು ತಹಶೀಲ್ದಾರ್‌ಗೆ ಪತ್ರ ಬರೆದಿರುವ ಅವರು, ‘ಸರ್ಕಾರಿ ಸರ್ವೇ ನಂಬರ್‌ 167/ಆ ರಲ್ಲಿ 56 ಎಕರೆ 30 ಗುಂಟೆ ಜಮೀನು ಇದೆ. ಖಾಸಗಿ ಕಂಪನಿಯವರು ತಾಲ್ಲೂಕಿನ ರಸ್ತಾಪುರ ಗ್ರಾಮದ ಬಳಿ ನಡೆದ ರಸ್ತೆ ಕಾಮಗಾರಿಗೆ ಮುರಮ್ ಸಾಗಣೆ ಮಾಡುತ್ತಿದ್ದಾರೆ. ಸಾರ್ವಜನಿಕ ಆಸ್ತಿಯನ್ನು ಕೊಳ್ಳೆ ಹೊಡೆಯುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT