ADVERTISEMENT

ರಚನೆಯಾಗದ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿಗಳು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 7:32 IST
Last Updated 7 ಫೆಬ್ರುವರಿ 2018, 7:32 IST

ಯಾದಗಿರಿ: ‘ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ರಚಿಸುವಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಷು ರಾಠೋಡ ಅಸಹಕಾರ ತೋರುತ್ತಿದ್ದು, ಜಿಲ್ಲಾ ಪಂಚಾಯಿತಿ ಸಿಇಒ ಸ್ಥಾಯಿ ಸಮಿತಿ ರಚನೆಗೆ ಮುಂದಾಗಬೇಕು’ ಎಂದು ತಾಲ್ಲೂಕು ಪಂಚಾಯಿತಿ
ಸದಸ್ಯ ಮಖ್ಬೂಲ್ ಪಟೇಲ್ ಒತ್ತಾಯಿಸಿದ್ದಾರೆ.

‘ನೂತನ ತಾಲ್ಲೂಕು ಪಂಚಾಯಿತಿ ಆಡಳಿತ ರಚನೆಯಾಗಿ ಎರಡು ವರ್ಷ ಪೂರೈಸಿದೆ. ಆರು ಬಾರಿ ಸಾಮಾನ್ಯ ಸಭೆ, ಮೂರು ಕೆಡಿಪಿ, ಒಂದು ಬಾರಿ ತ್ರೈಮಾಸಿಕ ಕೆಡಿಪಿ ಸಭೆಗಳನ್ನು ನಡೆಸಲಾಗಿದೆ. ಆದರೆ, ಇದುವರೆಗೂ ಸ್ಥಾಯಿ ಸಮಿತಿ ರಚನೆಗೆ ಅಜೆಂಡಾ ಮಂಡಿಸಿಲ್ಲ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಾಷು ರಾಠೋಡ ಅವರ ನಿರ್ಲಕ್ಷ್ಯದಿಂದಾಗಿ ಇದುವರೆಗೂ ಸ್ಥಾಯಿ ಸಮಿತಿ ರಚನೆ ಆಗಿಲ್ಲ. ಆದ್ದರಿಂದ, ಹಿರಿಯ ಅಧಿಕಾರಿಗಳು ಗಮನ ಹರಿಸಿ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

‘ಸಾಮಾನ್ಯ ಸಭೆ ನಡೆದಾಗ ಸದಸ್ಯರು ಒಕ್ಕೊರಲಿನಿಂದ ಸ್ಥಾಯಿ ಸಮಿತಿ ರಚಿಸುವಂತೆ ಒತ್ತಾಯಿಸಿದ್ದಾರೆ. ಆದರೂ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಚರ್ಚೆಯಲ್ಲಿ ಭಾಗವಹಿಸಿಲ್ಲ’ ಎಂದು ದೂರಿದ್ದಾರೆ.

ADVERTISEMENT

ಅಧ್ಯಕ್ಷರು ಸಹಕರಿಸುತ್ತಿಲ್ಲ: ಇಒ

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ರಚನೆ ಮಾಡಲು ಸಾಮಾನ್ಯ ಸಭೆಯಲ್ಲಿ ಅಜೆಂಡಾ ಇಟ್ಟು ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಅಧ್ಯಕ್ಷರು ಚರ್ಚೆಯಲ್ಲಿ ಭಾಗವಹಿಸುತ್ತಿಲ್ಲ. ಅವರಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದೇನೆ. ಮುಂದಿನ ಸಭೆಯಲ್ಲಿ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯವಿರ್ವಾಹಕ ಅಧಿಕಾರಿ ಬಿ.ಎಸ್.ರಾಠೋಡ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.