ADVERTISEMENT

ಅಧಿಕಾರಿಗಳ ದಾಳಿ: 6 ವಾಹನ ಜಪ್ತಿ

ಹತ್ತಿ ಬಿಡಿಸುತ್ತಿದ್ದ 15 ಮಕ್ಕಳು ಮರಳಿ ಶಾಲೆಗೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 10:36 IST
Last Updated 19 ಡಿಸೆಂಬರ್ 2019, 10:36 IST
ಗುರುಮಠಕಲ್ ತಾಲ್ಲೂಕಿನ ಮತ್ತು ಸೈದಾಪುರ ವ್ಯಾಪ್ತಿಯಲ್ಲಿ ಹತ್ತಿ ಬಿಡಿಸುತ್ತಿದ್ದ ಶಾಲಾ ಮಕ್ಕಳ ಬಗ್ಗೆ ಅಧಿಕಾರಿಗಳು ವರದಿ ಪಡೆದರು
ಗುರುಮಠಕಲ್ ತಾಲ್ಲೂಕಿನ ಮತ್ತು ಸೈದಾಪುರ ವ್ಯಾಪ್ತಿಯಲ್ಲಿ ಹತ್ತಿ ಬಿಡಿಸುತ್ತಿದ್ದ ಶಾಲಾ ಮಕ್ಕಳ ಬಗ್ಗೆ ಅಧಿಕಾರಿಗಳು ವರದಿ ಪಡೆದರು   

ಯಾದಗಿರಿ: ಗುರುಮಠಕಲ್ ತಾಲ್ಲೂಕಿನ ಮತ್ತು ಸೈದಾಪುರ ವ್ಯಾಪ್ತಿಯಲ್ಲಿ ಬರುವ ಗುಂಜನೂರ, ಚಲ್ಹೇರಿ, ಜೈಗ್ರಾಮ, ನಂದೆಪಲ್ಲಿ, ಸಂಕ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಸೋಮವಾರ ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರ ಇಲಾಖೆ ಅಧಿಕಾರಿಗಳು ಹತ್ತಿ ಹೊಲಗಳಿಗೆ ಅನಿರೀಕ್ಷಿತ ದಾಳಿ ನಡೆಸಿ, ಶಾಲೆ ಬಿಟ್ಟ ಮಕ್ಕಳ ತಪಾಸಣೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ತೆಯಾದ 6ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ 15 ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದ್ದಾರೆ.

ಅನಿರೀಕ್ಷಿತವಾಗಿ ದಾಳಿ ಮಾಡಿದಾಗ 6 ಟಂಟಂ, ಟಾಟಾ ಏಸ್ವಾಹನಗಳಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಿ ರುವುದು ಕಂಡುಬಂದಿದೆ. ಈ ವಾಹ ನಗಳನ್ನು ತಡೆಹಿಡಿದು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳ ತಂಡ ವಾಹನ ಚಾಲಕರ ಮತ್ತು ಮಕ್ಕಳ ಮಾಹಿತಿಯನ್ನು ಪಡೆಯಿತು. ಪೊಲೀಸ್ ಇಲಾಖೆಯವರು ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೆ ದಂಡ ವಿಧಿಸುವುದರ ಜೊತೆಗೆ 1988ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಬಂಧಿಸಿದ ವಾಹನ ಚಾಲಕರಿಗೆ ಚಾಲನೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.

ADVERTISEMENT

ಈ ವೇಳೆ ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ಠಾಕೂರ್,ಡಿಸಿಪಿಯು ಘಟಕದ ಸಾಬಯ್ಯ, ಮಕ್ಕಳ ಸಹಾಯವಾಣಿಯ ಶರಣಪ್ಪ, ಕಾರ್ಮಿಕ ಇಲಾಖೆಯ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.