ADVERTISEMENT

ವಾಂತಿ– ಭೇದಿ: 70ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ

ಮಾಚಗುಂಡಾಳ ಗ್ರಾಮದಲ್ಲಿ ಅಶುದ್ಧ ನೀರು ಸೇವನೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 19:45 IST
Last Updated 14 ಸೆಪ್ಟೆಂಬರ್ 2021, 19:45 IST

ಸುರಪುರ (ಯಾದಗಿರಿ ಜಿಲ್ಲೆ): ಇಲ್ಲಿನ ಮಾಚಗುಂಡಾಳ ಗ್ರಾಮದಲ್ಲಿ ಮಂಗಳವಾರ ನೂರಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದು, 70ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

70 ಜನರಿಗೆ ಸರ್ಕಾರಿ ಆಸ್ಪತ್ರೆ ಯಲ್ಲಿ ಮತ್ತು ಉಳಿದವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲಿಸಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ. ನಾಯಕ ಅವರು, ‘ಗ್ರಾಮದ ಬಾವಿ ಹಾಗೂ ಟ್ಯಾಂಕ್‌ಗಳಲ್ಲಿನ ನೀರು ಪರಿಶೀಲಿಸಲಾಗಿದ್ದು, ಕಲುಷಿತ ನೀರು ಸೇವನೆಯಿಂದ ವಾಂತಿ, ಭೇದಿ ಸಂಭವಿ ಸಿರಬಹುದು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.