ADVERTISEMENT

ಹೋಮ್ ಐಸೊಲೇಷನ್‍ನಲ್ಲಿ 70 ಜನ

3 ವ್ಯಕ್ತಿಗಳ ಮಾದರಿ ಪರೀಕ್ಷೆ ವರದಿ ಬರಬೇಕಿದೆ: ರಜಪೂತ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 15:54 IST
Last Updated 28 ಮಾರ್ಚ್ 2020, 15:54 IST
ಪ್ರಕಾಶ್ ಜಿ.ರಜಪೂತ
ಪ್ರಕಾಶ್ ಜಿ.ರಜಪೂತ   

ಯಾದಗಿರಿ: ಯಾದಗಿರಿ ತಾಲ್ಲೂಕಿನಲ್ಲಿ 29, ಶಹಾಪುರ ತಾಲ್ಲೂಕಿನಲ್ಲಿ 19 ಹಾಗೂ ಸುರಪುರ ತಾಲ್ಲೂಕಿನಲ್ಲಿ 22 ಸೇರಿದಂತೆ ಮಾರ್ಚ್ 28ರವರೆಗೆ ಜಿಲ್ಲೆಯಲ್ಲಿ ಒಟ್ಟು 70 ಜನ ವಿದೇಶ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

5 ವ್ಯಕ್ತಿಗಳ ಮಾದರಿ ಸಂಗ್ರಹ

ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ 2 ಮಾದರಿ ಸೇರಿದಂತೆ ಜಿಲ್ಲೆಯಲ್ಲಿ ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 5 ವ್ಯಕ್ತಿಗಳ ಮಾದರಿಗಳಲ್ಲಿ 2 ನೆಗೆಟಿವ್ ಫಲಿತಾಂಶ ಬಂದಿವೆ. 3 ವ್ಯಕ್ತಿಗಳ ಮಾದರಿ ಪರೀಕ್ಷೆಯ ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.

ವೈರಸ್ ಸೋಂಕಿತ ರೋಗಿಗಳಿಗಾಗಿ ಯಾದಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15, ಶಹಾಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 2 ಹಾಗೂ ಸುರಪುರ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ಸೇರಿದಂತೆ ಒಟ್ಟು 27 ಐಸೊಲೇಷನ್ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಸಹಾಯವಾಣಿ-104 ಕ್ಕೆ ಬರುವ ಕರೆಗಳಿಗಾಗಿ 3 ಸಿಬ್ಬಂದಿಗಳನ್ನು ಮೀಸಲಿರಿಸಿದೆ. ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950 ಗೆ 13 ಕರೆಗಳು ಸ್ವೀಕೃತವಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.