ADVERTISEMENT

74ನೇ ಗಣರಾಜ್ಯೋತ್ಸವ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ರಿಂದ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 5:29 IST
Last Updated 27 ಜನವರಿ 2023, 5:29 IST
ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವಾಣ್ 74ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು
ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವಾಣ್ 74ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು   

ಯಾದಗಿರಿ : ಗಣರಾಜ್ಯೋತ್ಸವವು ಭಾರತೀಯರ ಪಾಲಿಗೆ ಮಹತ್ವದ ದಿನವಾಗಿದ್ದು, ಸಮಾನತೆ, ಭ್ರಾತೃತ್ವ, ರಾಜಕೀಯ, ಸಾಮಾಜಿಕ, ಆರ್ಥಿಕವಾಗಿ ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸಿಕೊಡುವುದೇ ಸಂವಿಧಾನದ ಮುಖ್ಯ ಆಶಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವಾಣ್ ಅಭಿಪ್ರಾಯಿಸಿದರು.

74ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅಲೆಮಾರಿ, ಅರೆಅಲೆ ಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರನಾಥ ಕೆ.ನಾದ್, ನಗರಾಭಿ ವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿಲ್ಲಾಧಿಕಾರಿ ಸ್ನೇಹಲ್‌ ಆರ್, ಜಿಲ್ಲಾ ಪಂಚಾಯಿತಿ ಸಿಇಒ ಅಮರೇಶ ಆರ್.ನಾಯ್ಕ್, ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.