ADVERTISEMENT

ಪಕ್ಷ ವಿರೋಧಿ ಚಟುವಟಿಕೆ: 8 ಜನರ ಉಚ್ಛಾಟನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 12:11 IST
Last Updated 3 ಜೂನ್ 2023, 12:11 IST
   
  • ಯಾದಗಿರಿ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸದೆ ವಿರೋಧಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಕೆಲವು ಪದಾಧಿಕಾರಿಗಳನ್ನು ಉಚ್ಛಾಟಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಮಾಧ್ಯಮ ವಕ್ತಾರ ಸ್ಯಾಂಸನ್ ಮಾಳಿಕೇರಿ ತಿಳಿಸಿದರು.

ಕೆಲವು ಪದಾಧಿಕಾರಿಗಳು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಸಾಕ್ಷಿ ಸಮೇತ ಜಿಲ್ಲಾ ಘಟಕದ ಅಧ್ಯಕ್ಷ ಬಸರಡ್ಡಿ ಅನಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ನಾಯಕ, ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಮರೆಪ್ಪ ಬಿಳ್ಹಾರ ನೇತೃತ್ವದ ತಂಡ ಸಮಗ್ರವಾಗಿ ಪರಿಶೀಲಿಸಿ ಈ ಕ್ರಮ ಕೈಗೊಂಡಿದೆ ಎಂದು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಉಚ್ಛಾಟನೆಗೊಂಡ ಪದಾಧಿಕಾರಿಗಳು :

ADVERTISEMENT

ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರಕುಂದಿ, ಮುಸ್ಲಿಂ ಸಮಾಜದ ಮುಖಂಡ ಜಹಿರುದ್ದೀನ್ ಸವೇರಾ, ಶಹಾಪುರ ಎಪಿಎಂಸಿ ಸದಸ್ಯ ಸಂತೋಷ ನಿರ್ಮಲಕರ್, ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಮಲ್ಲು ಶಿವಪುರ, ಕಾರ್ಮಿಕ ಘಟಕದ ಜಿಲ್ಲಾ ಕಾರ್ಯದರ್ಶಿ ಭೀಮರಾಯ ನಾಯ್ಕಲ್, ಕುರುಬ ಸಮಾಜದ ಪ್ರಭಾವಿ ಮುಖಂಡ ಹೊನ್ನಪ್ಪ ಮುಷ್ಟೂರ, ದಲಿತ ಸಮಾಜದ ಮುಖಂಡ ವಿಜಯಕುಮಾರ ಶಿರಗೋಳ, ವಾಲ್ಮೀಕಿ ಸಮಾಜದ ಮುಖಂಡ ಸುಭಾಷ್‌ ಹೆಡಗಿಮದ್ರಾ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವನಾಥ ಪಾಟೀಲ, ಸೋಮಶೇಖರ್ ಮಸ್ಕನಳ್ಳಿ, ಸುರೇಶ ಮಡ್ಡಿ, ಸಾಯಿಬಣ್ಣ ಬಾಡಿಯಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.