
ವಡಗೇರಾ (ಯಾದಗಿರಿ ಜಿಲ್ಲೆ): ಪಟ್ಟಣದ ಸರ್ಕಾರಿ ಪ್ರೌಢ ಶಾಲಾ ಕಟ್ಟಡದ ಹಿಂಬದಿಯ ಮರದಲ್ಲಿ 9ನೇ ತರಗತಿ ವಿದ್ಯಾರ್ಥಿ ಪವನ್ ಮಲ್ಲಪ್ಪ (16) ಶವ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ಪಟ್ಟಣದ ಮಲ್ಲಪ್ಪ–ಲಕ್ಷ್ಮಿ ದಂಪತಿಯ ಪುತ್ರ ಪವನ್, ಬೆಳಿಗ್ಗೆ ಶಾಲೆಯಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ. ಬಳಿಕ ಕೀರು ಪರೀಕ್ಷೆಯೂ ಬರೆದಿದ್ದಾನೆ. ಮಧ್ಯಾಹ್ನ 2ರ ಸುಮಾರಿಗೆ ವಿದ್ಯಾರ್ಥಿಗಳು ಶಾಲಾ ಕಟ್ಟಡ ಹಿಂಬದಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.
‘ಮರಣೋತ್ತರ ಪರೀಕ್ಷೆ ವರದಿ ಆಧರಿಸಿ, ಕುಟುಂಬಸ್ಥರಿಂದ ಅರ್ಜಿ ಸ್ವೀಕರಿಸಿ ಸರಿಯಾಗಿ ತನಿಖೆ ನಡೆಸಿ ನ್ಯಾಯ ಒದಗಿಸಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್‌ಪಿ ಪೃಥ್ವಿಕ್ ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.