ADVERTISEMENT

ಹೋರಾಟಗಾರರನ್ನು ಸ್ಮರಿಸುವ ದಿನ: ವಿನಯಕುಮಾರ ಪಾಟೀಲ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 16:01 IST
Last Updated 17 ಸೆಪ್ಟೆಂಬರ್ 2020, 16:01 IST
ಹುಣಸಗಿಯಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಯಲ್ಲಿ ತಹಶೀಲ್ದಾರ್ ವಿನಯಕುಮಾರ ಪಾಟೀಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು
ಹುಣಸಗಿಯಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಯಲ್ಲಿ ತಹಶೀಲ್ದಾರ್ ವಿನಯಕುಮಾರ ಪಾಟೀಲ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು   

ಹುಣಸಗಿ: ನಿಜಾಮನ ಆಡಳಿತದ ಕಪಿಮುಷ್ಠಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಇಂದಿನ ದಿನದಂದು ಸ್ವಾತಂತ್ರ್ಯವಾಗಿದ್ದು, ಈ ಹೋರಾಟದಲ್ಲಿ ಪಾಲ್ಗೊಂಡಿದ್ದ ನಾಯಕರನ್ನು ಸ್ಮರಿಸುವ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ್ ವಿನಯಕುಮಾರ ಪಾಟೀಲ ಹೇಳಿದರು.

ಹುಣಸಗಿ ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ಇಲ್ಲಿನ ಸ್ಥಳೀಯ ಹೋರಾಟಗಾರರ ಸತತ ಪ್ರಯತ್ನದಿಂದಾಗಿ ಈ ಪ್ರದೇಶ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಒಂದಾಯಿತು ಎಂದು ಹೇಳಿದರು.

ಉಪ ಖಜಾನೆ ಅಧಿಕಾರಿ ಸಣ್ಣಕೆಪ್ಪ ಕೊಂಡಿಕಾರ್ ಅವರು ಕವನ ವಾಚನದ ಮೂಲಕ ಕಲ್ಯಾಣ ಕರ್ನಾಟಕದ ಹೋರಾಟದ ಕುರಿತು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ, ಹುಣಸಗಿ ಜಿ.ಪಂ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ ಮಾತನಾಡಿದರು.

ADVERTISEMENT

ವರ್ಗಾವಣೆಗೊಂಡ ಸಿಪಿಐ ವಿ.ಎಸ್.ಹಿರೇಮಠ ಅವರನ್ನು ಸನ್ಮಾನಿಸಿತು.

ಎಪಿಎಂಸಿ ಅಧ್ಯಕ್ಷ ದೇವಣ್ಣ ಮಲಗಲದಿನ್ನಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಖಾರಿ ಅರುಣಕುಮಾರ ಚವ್ಹಾಣ ಇದ್ದರು.

ಶಿಕ್ಷಕ ಮಶಾಕ ಯಾಳಗಿ ನಿರೂಪಿಸಿದರು. ಬಸವರಾಜ ಬಿರಾದಾರ ಸ್ವಾಗತಿಸಿದರು. ನಾಗನಗೌಡ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.