ಕೆಂಭಾವಿ: ಪಟ್ಟಣದ ಐತಿಹಾಸಿಕ ಭೋಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಶ್ರಾವಣ ಮಾಸದ ಮುಕ್ತಾಯ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
ಶನಿವಾರದಿಂದ ದೇವಸ್ಥಾನದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ಏರ್ಪಟ್ಟು ಬೆಳಗಿನ ಜಾವದವರೆಗೆ ಭಜನೆ ಕಾರ್ಯಕ್ರಮ ಜರುಗಿತು.
ಭಾನುವಾರ ಮುಂಜಾನೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರಿಂದ ಕುಂಭ ಮತ್ತು ಮಕ್ಕಳ ಕೋಲಾಟ, ಲೆಜಿಂದೊಂದಿಗೆ ಪಲ್ಲಕ್ಕಿ ಮೆರವಣಿಗೆ ನಡೆದು ನಂತರ ಭೋಗೇಶ್ವರನಿಗೆ ರಾಜಶೇಖರಯ್ಯ ಹಿರೇಮಠ ನೇತೃತ್ವದಲ್ಲಿ ಅಭಿಷೇಕ, ಲಕ್ಷ ಬಿಲ್ವಾರ್ಚನೆ, ರುದ್ರ ಪಠಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ, ಸೇವಾಕರ್ತರಿಗೆ ಮತ್ತು ಸ್ವಯಂ ಸೇವಕರಿಗೆ ಸನ್ಮಾನ ಕಾರ್ಯಕ್ರಮಗಳು ನಡೆದವು. ನಂತರ ಒಂದು ತಿಂಗಳ ಪರ್ಯಂತ ಶ್ವೇತ ವಸ್ತ್ರ ಧರಿಸಿ ಭೋಗೇಶ್ವರನ ಸೇವೆಗೈದ ಭಕ್ತರು ತಮ್ಮ ಸೇವೆಯನ್ನು ಪೂರ್ಣಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.