ಶಹಾಪುರ: ‘ದೇವು ಪತ್ತಾರ ಅವರ ಈಶಾನ್ಯ ಒಡಲು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಲಭಿಸಿರುವುದು ಸಗರನಾಡಿನ ಹಿರಿಮೆ ಹೆಚ್ಚಿಸಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ರವೀಂದ್ರನಾಥ ಹೊಸಮನಿ, ಗೌರವ ಕಾರ್ಯದರ್ಶಿ ರಾಘವೇಂದ್ರ ಹಾರಣಗೇರಾ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರತಿಭೆಯಾಗಿರುವ ದೇವು ಪತ್ತಾರ ಅವರು, ತಾಲ್ಲೂಕಿನ ಅಣಬಿ ಗ್ರಾಮದಲ್ಲಿ 1 ರಿಂದ 3ನೇ ತರಗತಿಯವರೆಗೆ ಹಾಗೂ 3 ರಿಂದ 7ನೇ ತರಗತಿಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಪೇಟದಲ್ಲಿ ಮತ್ತು ಪ್ರೌಢ ಶಿಕ್ಷಣವನ್ನು ನಗರದ ಸರ್ಕಾರಿ ಶಾಲೆಯಲ್ಲಿ ಪೂರೈಸಿದ್ದಾರೆ.
ಪತ್ರಕರ್ತರಾಗಿ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಈಶಾನ್ಯ ಒಡಲು ಕೃತಿಯಲ್ಲಿ ನಮ್ಮ ಕಲ್ಯಾಣ ಕರ್ನಾಟದ ಸಮಸ್ಯೆ ಹಾಗೂ ಸವಾಲುಗಳಿಗೆ ಮುಖಾಮುಖಿಯಾಗಿದ್ದಾರೆ ಎಂದು ತಿಳಿಸಿದರು.
ಸಗರನಾಡಿನಲ್ಲಿ ಪತ್ರಕರ್ತರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ ಎನ್ನುವ ಹಿರಿಮೆಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಲಭಿಸಿರುವುದಕ್ಕೆ ಶಹಾಪುರ ತಾಲ್ಲೂಕಿನ ಸಾಹಿತ್ಯ ಆಸಕ್ತರು ಸಂಭ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.