ADVERTISEMENT

ಯಾದಗಿರಿ ಆರ್‌ಟಿಒ ಕಚೇರಿ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 10:33 IST
Last Updated 1 ಜನವರಿ 2020, 10:33 IST
ಯಾದಗಿರಿಯ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಬಳಿ ಪೊಲೀಸರನ್ನು ನಿಯೋಜಿಸಲಾಗಿತ್ತು
ಯಾದಗಿರಿಯ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಬಳಿ ಪೊಲೀಸರನ್ನು ನಿಯೋಜಿಸಲಾಗಿತ್ತು   

ಯಾದಗಿರಿ: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಹಲವು ದಾಖಲಾತಿಗಳನ್ನು ವಶಕ್ಕೆ ಪಡೆದರು.

ದಾಳಿಯಲ್ಲಿ ಎಸಿಬಿ ಯಾದಗಿರಿ ಡಿಎಸ್‌ಪಿ ಡಾ. ಸಂತೋಷ ಕೆ.ಎನ್., ರಾಯಚೂರು ಎಸಿಬಿ ಡಿಎಸ್‌ಪಿ ಸಂತೋಷ ಬನ್ನಟ್ಟಿ ಸೇರಿದಂತೆ ಸಿಬ್ಬಂದಿ ಇದ್ದರು.

‘ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕಚೇರಿ ಮೇಲೆ ದಾಳಿ ನಡೆಸಿದ್ದೇವೆ. ದಾಖಲೆಗಳು ಹೊಂದಿಕೆಯಾಗುತ್ತಿಲ್ಲ. ವಿಚಾರಣೆಯ ನಂತರ ತಿಳಿದು ಬರಲಿದೆ. ಇನ್ನೂ ದಾಖಲೆಗಳ ಸಂಗ್ರಹದಲ್ಲಿ ತೊಡಗಿಸಿಕೊಂಡಿದ್ದೇವೆ’ ಎಂದುಎಸಿಬಿ ಯಾದಗಿರಿ ಡಿಎಸ್‌ಪಿ ಡಾ.ಸಂತೋಷ ಕೆ.ಎನ್‌., ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.