ADVERTISEMENT

ರಸ್ತೆ ಕಳಪೆ ಕಾಮಗಾರಿ ಕಂಡು ಬಂದರೆ ಕ್ರಮ: ಶಾಸಕರ ಎಚ್ಚರಿಕೆ

₹13 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರ ಚಾಲನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 16:26 IST
Last Updated 22 ನವೆಂಬರ್ 2020, 16:26 IST
ಯಾದಗಿರಿಯ ವಾರ್ಡ್‌ ಸಂಖ್ಯೆ 6ರಲ್ಲಿ ₹13 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು
ಯಾದಗಿರಿಯ ವಾರ್ಡ್‌ ಸಂಖ್ಯೆ 6ರಲ್ಲಿ ₹13 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು   

ಯಾದಗಿರಿ: ಯಾವುದೇ ಕೆಲಸವಾಗಲಿ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಯ ನಂತರ ಪರಿಶೀಲನೆ ಮಾಡಲಾಗುವುದು. ಕಳಪೆ ಕಂಡು ಬಂದರೆಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಎಚ್ಚರಿಸಿದರು.

ನಗರದ ವಾರ್ಡ್‌ ಸಂಖ್ಯೆ 6ರಲ್ಲಿ 14ನೇ ಹಣಕಾಸು ಯೋಜನೆಯಡಿ ಹನುಮಾನ ದೇವಸ್ಥಾನದಿಂದ ಲಚ್ಚಣ್ಣ ಸ್ವಾಮಿಮಠದ ವರೆಗೆ ₹13 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರಸಭೆಯ ಪ್ರತಿಯೊಬ್ಬ ವಾರ್ಡ್ ಸದಸ್ಯರು ನಿಮ್ಮ ವಾರ್ಡ್‌ಗಳಲ್ಲಿ ಯಾವುದೇ ಕಾಮಗಾರಿ ವಿಳಂಬವಾದರೆ ನಮ್ಮ ಗಮನಕ್ಕೆ ತರಬೇಕು. ನಿಮ್ಮ ವಾರ್ಡ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು. ಜೊತೆಗೆ ತಮ್ಮ ವಾರ್ಡ್‌ಗಳಲ್ಲಿರುವ ಪೌರ ಕಾರ್ಮಿಕರ ಸಮಸ್ಯೆ, ಕುಡಿಯುವ ನೀರು ಹಾಗೂ ಕಸದ ವಿಲೇವಾರಿ ಸಮಸ್ಯೆಗಳ ಕುರಿತು ನೂತನ ಅಧ್ಯಕ್ಷಹಾಗೂ ನನ್ನ ಗಮನಕ್ಕೆ ತರುವ ಮೂಲಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ADVERTISEMENT

ಈ ವೇಳೆ ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ವಾರ್ಡ್‌ನ ಸದಸ್ಯೆ ಅಂಬಯ್ಯ ಶಾಬಾದಿ, ಶರಣಗೌಡ ಬಾಡಿಯಾಳ, ರಮಾದೇವಿ, ಪೌರಾಯುಕ್ತ ಬಕ್ಕಪ್ಪ ಹೊಸಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.