ನಾರಾಯಣಪುರ: ಸರ್ಕಾರಿ ಮಾದರಿ ಪ್ರಾಥಮಿಕ (ಕ್ಯಾಂಪ್) ಶಾಲೆಯಲ್ಲಿ ಗುರುವಾರ ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನ ಮುಕ್ತ ದಿನ ಆಚರಿಸಲಾಯಿತು.
ಮುಖ್ಯಶಿಕ್ಷಕಿ ಬಸಮ್ಮ ಬಿರಾದಾರ ಮಾತನಾಡಿ, ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಮಹಾಂತ ಶಿವಯೋಗಿಗಳು ತಮ್ಮ ಜೋಳಿಗೆಯೊಂದಿಗೆ ತೆರಳಿ ಜಾಗೃತಿ ಮೂಡಿಸಿದ್ದರು.
ವ್ಯಸನ ಮುಕ್ತ ಸಮಾಜಕ್ಕೆ ಶ್ರೀಗಳು ತಮ್ಮನ್ನು ತಾವು ತೊಡಗಿಸಿಕೊಂಡು ಅನೇಕರನ್ನು ಸುಧಾರಣೆ ಮಾಡಿದ್ದರು ಎಂದರು. ಶಿಕ್ಷಕರು, ಬಿಸಿಯೂಟ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.