ADVERTISEMENT

‘ಮದ್ಯವ್ಯಸನದಿಂದ ಆಯಸ್ಸು ಕ್ಷೀಣ’

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 16:17 IST
Last Updated 28 ಜುಲೈ 2020, 16:17 IST
ಯಾದಗಿರಿಯ ಹೊಸ ಬಸ್ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಸಭೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಹೊಸಕೇರಪ್ಪ ಕೆ., ಮಾತನಾಡಿದರು
ಯಾದಗಿರಿಯ ಹೊಸ ಬಸ್ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಸಭೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಹೊಸಕೇರಪ್ಪ ಕೆ., ಮಾತನಾಡಿದರು   

ಯಾದಗಿರಿ: ಮದ್ಯವ್ಯಸನದಿಂದ ಆಯಸ್ಸು ಕ್ಷೀಣಿಸಿ ಅನಾರೋಗ್ಯ ಸಮಸ್ಯೆ ಉಂಟಾಗುತ್ತದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಾಗಲು ದುಶ್ಚಟಗಳಿಂದ ದೂರ ಇರಬೇಕು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಹೊಸಕೇರಪ್ಪ ಕೆ., ಹೇಳಿದರು.

ನಗರದ ಹೊಸ ಬಸ್ ನಿಲ್ದಾಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಪೊಲೀಸ್, ಮಹಿಳಾ ಪೊಲೀಸ್ ಠಾಣೆ, ಯಾದಗಿರಿ ಉಪ ವಿಭಾಗ ವತಿಯಿಂದ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಸಭೆಯಲ್ಲಿ ಮಾತನಾಡಿದರು.

ನಶೆ ಪದಾರ್ಥಗಳ ಸೇವನೆಯಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಏರುತ್ತಿದೆ. ಸದೃಢ ಸಮಾಜ ನಿರ್ಮಾಣಕ್ಕಾಗಿ ನಶೆ ಪದಾರ್ಥಗಳನ್ನು ತೊರೆಯುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೆಲ ಕಿಡಿಗೇಡಿಗಳು ಇಂಥ ಪದಾರ್ಥಗಳನ್ನು ಕದ್ದುಮುಚ್ಚಿ ಮಾರುವುದರ ಜೊತೆಗೆ ಯುವಕರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಅಂಥವರು ಕಂಡು ಬಂದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಹೇಳಿದರು.

ADVERTISEMENT

ಸಾರ್ವಜನಿಕರು ಪೊಲೀಸರ ಜೊತೆ ಕೈ ಜೋಡಿಸಿದಲ್ಲಿ ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ತಡೆಯಬಹುದಾಗಿದ್ದು, ಯಾವುದೇ ಸಂದರ್ಭದಲ್ಲಾದರೂ ಸಾರ್ವಜನಿಕರ ಸಹಾಯಕ್ಕೆ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಹೇಳಿದರು.

ಎಎಸ್‌ಐ ದತ್ರಾತೇಯ, ಸುಧಾಕರರೆಡ್ಡಿ, ಶಿವರಾಜರಡ್ಡಿ ಮತ್ತು ಶೇಖರ್ ಸೇರಿದಂತೆ ಸಾರ್ವಜನಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.