ADVERTISEMENT

ಅಂಬೇಡ್ಕರ್‌ರ ತ್ರಿವಳಿ ಮಂತ್ರ ಪಾಲಿಸಿ; ಶಾಸಕ ರಾಜೂಗೌಡ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 6:30 IST
Last Updated 24 ಏಪ್ರಿಲ್ 2022, 6:30 IST
ಹುಣಸಗಿ ತಾಲ್ಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಶಾಸಕ ರಾಜೂಗೌಡ ಚಾಲನೆ ನೀಡಿದರು
ಹುಣಸಗಿ ತಾಲ್ಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಶಾಸಕ ರಾಜೂಗೌಡ ಚಾಲನೆ ನೀಡಿದರು   

ಕಲ್ಲದೇವನಹಳ್ಳಿ (ಹುಣಸಗಿ): ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಿಳಿಸಿಕೊಟ್ಟ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರಗಳನ್ನು ಜೀವನದಲ್ಲಿ ಪಾಲಿಸಿದರೇ ನೆಮ್ಮದಿಯ ಬದುಕು ನಡೆಸಬಹುದು ಎಂದು ಶಾಸಕ ರಾಜುಗೌಡ ಹೇಳಿದರು.

ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿ, ಭಾರತಕ್ಕೆ ಶ್ರೇಷ್ಠವಾದ ಸಂವಿಧಾನ ರಚಿಸಿದ್ದಾರೆ. ನಾವು ಅದರ ಸಾರವನ್ನು ಅರಿತುಕೊಳ್ಳಬೇಕು. ಅವರ ಕನಸು ನನಸು ಮಾಡಲು ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದರು.

ADVERTISEMENT

ಡಾ. ಅಂಬೇಡ್ಕರ್ ಬರೆದ ಸಂವಿ ಧಾನ ವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಅದನ್ನು ಬದಲಾವಣೆ ಮಾಡುತ್ತೇವೆ ಎನ್ನುವುದು ಮೂರ್ಖತನ ಎಂದರು‌.

ವಿಶೇಷ ಉಪನ್ಯಾಸ ನೀಡಿ ಮಾತ ನಾಡಿದಕರಿಗೋಡೇಶ್ವರ, ಅಂಬೇಡ್ಕರ್ ಅವರ ಅನುಯಾಯಿ ಆದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಅನುಯಾಯಿ ಆಗ ಬಯಸುವವರು ಅವರ ತತ್ವಗಳನ್ನು ತಿಳಿದುಕೊಳ್ಳಬೇಕು. ಅವರೊಬ್ಬ ವಿಶ್ವ ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು. ಭಾರತೀಯರಿಗೆ ಸಂವಿಧಾನವೇ ಶ್ರೇಷ್ಠ ಗ್ರಂಥ ಎಂದರು.

ಜಿ.ಪಂ ಮಾಜಿ ಅಧ್ಯಕ್ಷ ರಾಜ ಶೇಖರಗೌಡ ಪಾಟೀಲ, ಮಾಜಿ ಸದಸ್ಯ ಎಚ್.ಪಾಟೀಲ, ರಾಮಣ್ಣ ಕಲ್ಲದೇವನ ಹಳ್ಳಿ ಮಾತನಾಡಿದರು. ನಾಗಣ್ಣ ಕಲ್ಲದೇವನಹಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಮುಖಂಡರಾದ ವಿರೇಶ ಚಿಂಚೋಳಿ, ಸಂಗಣ್ಣ ವೈಲಿ, ಬಿ.ಎಂ ಅಳ್ಳಿಕೊಟಿ, ಮೋತಿಲಾಲ್ ಚವ್ಹಾಣ, ಎಸ್.ಜಿ ಪಾಟೀಲ, ಮುಖಂಡರಾದ ಪರ ಮಾನಂದ ಚೆಟ್ಟಿ, ಶರಣಪ್ಪ ಗುಳಬಾಳ, ಸುರೇಶ ನೀರಲಗಿ, ಶಿವಣ್ಣ ಬಡಿಗೇರ ಇದ್ದರು. ಎಸ್.ಎಸ್.ಮಾರನಾಳ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.