ADVERTISEMENT

ಯಾದಗಿರಿ: ಅತಿಥಿ ಉಪನ್ಯಾಸಕರ ಮುಂದುವರಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2025, 15:27 IST
Last Updated 7 ಜೂನ್ 2025, 15:27 IST
ಯಾದಗಿರಿ ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಂಡಿತರಾವ ಪವಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು
ಯಾದಗಿರಿ ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಂಡಿತರಾವ ಪವಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು   

ಯಾದಗಿರಿ: 2024–2025ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರನ್ನು ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಮುಂದುವರಿಸಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಂಡಿತರಾವ ಪವಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಈಗಾಗಲೇ ಸರ್ಕಾರ ಅತಿಥಿ ಉಪನ್ಯಾಸಕರನ್ನು ಕಾಲೇಜಿನಲ್ಲಿ ನೇಮಕ ಮಾಡಿಕೊಳ್ಳಲು ಆದೇಶ ಹೊರಡಿಸಿದೆ. ಕೂಡಲೇ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸೂಚಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.

ಇದೇ ಸಂದರ್ಭದಲ್ಲಿ ಉಪ ನಿರ್ದೇಶಕರಿಗೆ ಅತಿಥಿ ಉಪನ್ಯಾಸಕರ ಸಮಸ್ಯೆ ಹಾಗೂ ಬೇಡಿಕೆ ವಿವರಿಸಲಾಯಿತು.

ADVERTISEMENT

ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಟಿ.ಹೊಸಮನಿ, ಪದಾಧಿಕಾರಿಗಳಾದ ಶಿವಾನಂದ, ಬಸವರಾಜ, ನರೇಂದ್ರ, ಸುಶಾಂತ, ಯಲ್ಲಪ್ಪ, ಬಸವರಾಜ ಜುಗೇರಿ, ಸತೀಶ ಹವಾಲ್ದಾರ್‌, ನಿಂಗಪ್ಪ, ಸುರೇಖಾ, ಜಾಕೀರಾ ಬೇಗಂ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.