ADVERTISEMENT

ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2019, 10:28 IST
Last Updated 29 ಡಿಸೆಂಬರ್ 2019, 10:28 IST
ಹುಣಸಗಿಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಯಿತು
ಹುಣಸಗಿಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಯಿತು   

ಹುಣಸಗಿ: ತಾಲ್ಲೂಕಿನಲ್ಲಿ ರಾಜುಗೌಡ್ರ ಗ್ರೌಂಡ್ ವರ್ಕ್ ಟೀಮ್ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಕ್ಷೇತ್ರದಲ್ಲಿ ಸೌಲಭ್ಯಗಳ ವಿತರಣೆಯಲ್ಲಿ ತೊಡಗಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದು ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಮಲಗಲದಿನ್ನಿ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಉಚಿತ ಆರೋಗ್ಯ ಕಾರ್ಡ್ ವಿತರಿಸಿ ಅವರು ಮಾತನಾಡಿದರು.
ಈ ತಂಡದಿಂದ ಕಳೆದ ಒಂದು ತಿಂಗಳಲ್ಲಿ 26 ಸಾವಿರ ಫಲಾನುಭವಿಗಳಿಗೆ ಉಚಿ ವಾಗಿ ಕಾರ್ಡ್ ವಿತರಿಸಲಾಗಿದೆ ಎಂದರು.

ಯೋಗಪಟು ಆನಂದ ಬಾರಿಗಿಡದ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯೋಗವನ್ನು ಅಳವ ಡಿಸಿಕೊಂಡು ಉತ್ತಮ ಆರೋಗ್ಯ ರೂಪಿಸಿಕೊಳ್ಳಬೇಕು ಎಂದರು.

ADVERTISEMENT

ಭಾರತ ಹಿಂದೆಯು ವಿಶ್ವ ಗುರುವಾಗಿತ್ತು. ಇಂದಿನ ಡಿಜಿಟಲ್ ಯುಗದಲ್ಲಿಯೂ ಯೋಗದಿಂದ ಮತ್ತೆ ವಿಶ್ವ ಗುರುವಾಗುವತ್ತ ದಾಪುಗಾಲು ಹಾಕುತ್ತಿದೆ. ಯೋಗದಿಂದ ಏಕಾಗ್ರತೆ ಹೆಚ್ಚುವದು ಅಲ್ಲದೇ, ಅಭ್ಯಾಸದಲ್ಲಿ ಉತ್ಸಾಹ ಬರುತ್ತದೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಮಾತನಾಡಿ, ಶಾಸಕ ರಾಜುಗೌಡ ಅವರ ತಾಯಿ ತಿಮ್ಮಮ್ಮ ಅವರು ಗುಣಮುಖರಾಗಲಿ ಎಂದು ತಾಲ್ಲೂಕಿನ ಹಲವಾರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಅಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅದರಂತೆ ರಾಜುಗೌಡ ಅವರ ಅಭಿಮಾನಿಗಳು ಹುಣಸಗಿಯ ನೀಲಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿ ಕೊಂಡಿರುವದು ಒಳ್ಳೇಯದು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ, ಎಸ್ಡಿಎಂಸಿ ಅಧ್ಯಕ್ಷ ವಿರೇಶ ಚಿಂಚೋಳಿ, ಮಲ್ಲಿಕಾರ್ಜುನಸ್ವಾಮಿ ಹಿರೇಮಠ, ಸಂಗಣ್ಣ ವೈಲಿ, ಎಂ.ಎಸ್. ಚಂದಾ, ಅನೀಲ ಬಳಿ, ರವಿ ಪುರಾಣಿಕಮಠ, ಮುದಕಪ್ಪ ದೇಸಾಯಿ, ಮಲ್ಲಿಕಾರ್ಜುನ ಹೆಬ್ಬಾಳ, ನಂದಪ್ಪ ಪೀರಾಪುರ, ವಿಠ್ಠಲ ಪವಾರ, ಬಾಬು, ವೆಂಕಟೇಶ ಹೆಬ್ಬಾಳ ಸೇರಿದಂತೆ ಇತರರು ಇದ್ದರು.

ಮಶಾಕ ಯಾಳಗಿ ಸ್ವಾಗತಿಸಿದರು. ನಾಗನಗೌಡ ಪಾಟೀಲ ನಿರೂಪಿಸಿದರು. ಸೋಮನಗೌಡ ವಂದಿಸಿದರು.

ಶಾಲೆಯ 250 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ ವಿತರಿಸಲಾಯಿತು.

ಶಾಸಕ ರಾಜುಗೌಡ ಅವರ ತಾಯಿ ತಿಮ್ಮಮ್ಮ ಅವರು ಬೇಗನೆ ಗುಣಮುಖರಾಗಲಿ ಎಂದು ತಾಲ್ಲೂಕಿನ ಗುಳಬಾಳ ಗ್ರಾಮದ
ಅನಾಥಾಶ್ರಮದಲ್ಲಿ ಪೂಜೆ ಸಲ್ಲಿಸಿ ಮಕ್ಕಳಿಗೆ ಊಟ ಮತ್ತು ಕಲಿಕಾ ಪರಿಕರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಠದ ಪೀಠಾಧಿಪತಿಗಳಾದ ಮರಿಹುಚ್ಚೇಶ್ವರ ಸ್ವಾಮೀಜಿ, ತಾಪಂ ಸದಸ್ಯ ಸೋಮಣ್ಣ ಸೋಮಣ್ಣ ಮೇಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.