ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮವನ್ನು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು
ಯಾದಗಿರಿ: ರಾಜ್ಯ ಸರ್ಕಾರದ ವತಿಯಿಂದ ₹440.63 ಕೋಟಿ ವೆಚ್ಚದಲ್ಲಿ 'ಆರೋಗ್ಯ ಆವಿಷ್ಕಾರ' ಯೋಜನೆಯಡಿ ಕಲ್ಯಾಣ ಕರ್ನಾಟಕ ವಿಭಾಗದ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಈ ಕಾರ್ಯಕ್ರಮ ಆಯೋಜಿಸಿದ್ದವು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪಪುರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು ಡಾ.ಅಜಯ್ ಧರ್ಮಸಿಂಗ್, ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು, ರಾಜಾ ವೇಣುಗೋಪಾಲ ನಾಯಕ, ಶರಣಗೌಡ ಕಂದಕೂರ, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.