ADVERTISEMENT

ಆಟೋ ಪಲ್ಟಿ: ಒಬ್ಬ ಸಾವು, ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 15:34 IST
Last Updated 22 ಜೂನ್ 2025, 15:34 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಯಾದಗಿರಿ: ಮನೆ ಉದ್ಘಾಟನೆ ಹಿನ್ನೆಲೆಯಲ್ಲಿ ಭಜನೆಗಾಗಿ ನಗರಕ್ಕೆ ಬಂದಿದ್ದ ಭಜನಾ ತಂಡವೊಂದು, ಕಾರ್ಯಕ್ರಮ ಮುಗಿಸಿ ತಮ್ಮ ಊರಿಗೆ ವಾಪಸ್ ತೆರಳುವಾಗ ಆಟೊ ಪಲ್ಟಿಯಾಗಿ ಒಬ್ಬ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಂದಳ್ಳಿ ಗ್ರಾಮದ ಬಳಿ ನಡೆದಿದೆ.

ADVERTISEMENT

ಘಟನೆ ವಿವರ: ದೇವರ ಭಜನೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಬಂದಳ್ಳಿ ಗ್ರಾಮದ ಸಮೀಪ ರಸ್ತೆಗೆ ಹಂದಿಯೊಂದು ಏಕಾಏಕಿ ಅಡ್ಡಬಂದಿದೆ. ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ, ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಯಾದಗಿರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.