ADVERTISEMENT

ನಗರ ಪ್ರದಕ್ಷಿಣೆ ಹಾಕಿದ ಜಿಲ್ಲಾಧಿಕಾರಿ, ಎಸ್ಪಿ, ಮಾಸ್ಕ್ ಧರಿಸಲು ಜಾಗೃತಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2022, 8:01 IST
Last Updated 16 ಜನವರಿ 2022, 8:01 IST
ನಗರ ಪ್ರದಕ್ಷಿಣೆ ಹಾಕಿದ ಜಿಲ್ಲಾಧಿಕಾರಿ, ಎಸ್ಪಿ,
ನಗರ ಪ್ರದಕ್ಷಿಣೆ ಹಾಕಿದ ಜಿಲ್ಲಾಧಿಕಾರಿ, ಎಸ್ಪಿ,   

ಯಾದಗಿರಿ: ವಾರಾಂತ್ಯ ಕರ್ಫ್ಯೂ ಕಾರಣ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿಅವರು ಭಾನುವಾರ ಬೆಳಿಗ್ಗೆ ನಗರದಲ್ಲಿ ಪ್ರದಕ್ಷಣೆ ಹಾಕಿ ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ನಗರದ ಚಿತ್ತಾಪುರ ರಸ್ತೆಯಲ್ಲಿ ತೆರಳಿದ ಅಧಿಕಾರಿಗಳು ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಿ ಮಾಸ್ಕ್ ನೀಡಿದರು.

ಬೈಕ್ ಸವಾರರು, ಟಂಟಂ ಆಟೊದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಿದರು.

ADVERTISEMENT

ಈ ವೇಳೆ ಅಂಗಡಿ ಮುಂಗಟ್ಟುನಲ್ಲಿ ಮುಖಕ್ಕೆ ಟವೆಲ್ ಮುಚ್ಚಿಕೊಳ್ಳಲು ವ್ಯಾಪಾರಸ್ಥರು ಮುಂದಾದರು. ಆಗ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು, ಮಾಸ್ಕ್ ಹಾಕಿಕೊಳ್ಳಿ. ಟವೆಲ್ ಸುತ್ತಿಕೊಳ್ಳಬೇಡಿ ಎಂದರು.

ಈ ವೇಳೆ ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ನಗರ ಠಾಣೆ ಪಿಎಸ್ಐ ಚಂದ್ರಶೇಖರ, ನಗರಸಭೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.